Wednesday, February 11, 2026
19.8 C
Bengaluru
Google search engine
LIVE
ಮನೆಜಿಲ್ಲೆಕಾಂಗ್ರೆಸ್ ಹೈಕಮಾಂಡ್ ಅಸ್ತಿತ್ವದ ಬಗ್ಗೆ ಬಸವರಾಜ ಬೊಮ್ಮಾಯಿ ಪ್ರಶ್ನೆ!

ಕಾಂಗ್ರೆಸ್ ಹೈಕಮಾಂಡ್ ಅಸ್ತಿತ್ವದ ಬಗ್ಗೆ ಬಸವರಾಜ ಬೊಮ್ಮಾಯಿ ಪ್ರಶ್ನೆ!

ಚಿತ್ರದುರ್ಗ: ರಾಜ್ಯದ ಜನತೆ ನೀಡಿದ ಅಧಿಕಾರವನ್ನು ಕಾಂಗ್ರೆಸ್ ತನ್ನ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊಲ್ಲಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿದರು.

ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಒಬ್ಬರು ಕುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದರೆ, ಇನ್ನೊಬ್ಬರು ಅದನ್ನು ಕಿತ್ತುಕೊಳ್ಳಲು ಹವಣಿಸುತ್ತಿದ್ದಾರೆ. ದಿನನಿತ್ಯದ ಈ ಕಿತ್ತಾಟದಿಂದಾಗಿ ಕರ್ನಾಟಕದ ಜನತೆಗೆ ಅಪಮಾನವಾಗುತ್ತಿದೆ. ಈ ಸರ್ಕಾರ ಎಷ್ಟು ಬೇಗ ತೊಲಗುತ್ತದೋ, ಅಷ್ಟು ಬೇಗ ರಾಜ್ಯದ ಜನರಿಗೆ ಒಳಿತಾಗುತ್ತದೆ ಎಂದು ಬೊಮ್ಮಾಯಿ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ದೆಹಲಿಗೆ ಕೈ ನಾಯಕರ ದಂಡು ಪದೇ ಪದೇ ಭೇಟಿ ನೀಡುತ್ತಿರುವ ವಿಚಾರದ ಬಗ್ಗೆ ಲೇವಡಿ ಮಾಡಿದ ಅವರು, ಕಾಂಗ್ರೆಸ್ ನಾಯಕರು ಅಧಿಕಾರಕ್ಕಾಗಿ ದೆಹಲಿಯಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಅಸಲಿಗೆ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಅಸ್ತಿತ್ವದಲ್ಲಿದೆಯೇ ಎಂಬ ಅನುಮಾನ ಕಾಡುತ್ತಿದೆ. ಆರು ತಿಂಗಳಿಂದ ಈ ಗೊಂದಲ ನಡೆಯುತ್ತಿದ್ದರೂ ಹೈಕಮಾಂಡ್ ಮೌನವಹಿಸಿದೆ. ಅಧಿಕಾರ ಅನ್ನೋದು ಅವರ ಸ್ವಂತ ಆಸ್ತಿನಾ? ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಮತ್ತು ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆರೋಪಿಸಿದ ಬೊಮ್ಮಾಯಿ, ಇದರ ವಿರುದ್ಧ ಬಿಜೆಪಿ ಬೃಹತ್ ಹೋರಾಟ ಹಮ್ಮಿಕೊಂಡಿದೆ ಎಂದು ತಿಳಿಸಿದರು. ಇನ್ನು ಸರ್ಕಾರದ ವೈಫಲ್ಯಗಳ ವಿರುದ್ಧ ರಾಜ್ಯದ ವಿವಿಧೆಡೆ 6 ರಿಂದ 7 ಬೃಹತ್ ಸಮಾವೇಶಗಳನ್ನು ನಡೆಸಲಾಗುವುದು. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ಸರ್ಕಾರದ ವಿರುದ್ಧ ಬಳ್ಳಾರಿಯಿಂದಲೇ ಹೋರಾಟದ ಕಹಳೆ ಮೊಳಗಿಸಲಿದ್ದೇವೆ ಎಂದರು.

ನಾವು ನಿಜವಾದ ಹಿಂದೂಗಳು”ಎಂಬ ಸಚಿವ ರಾಮಲಿಂಗಾರೆಡ್ಡಿ ಅವರ ಹೇಳಿಕೆಗೆ ತಿರುಗೇಟು ನೀಡಿದ ಬೊಮ್ಮಾಯಿ, ರಾಜ್ಯದಲ್ಲಿ ದೇಗುಲಗಳ ಅಭಿವೃದ್ಧಿಯಾಗಿದೆಯೋ ಅಥವಾ ಮಸೀದಿಗಳ ಅಭಿವೃದ್ಧಿಯಾಗಿದೆಯೋ ಎಂಬುದು ಜನರಿಗೆ ಚೆನ್ನಾಗಿ ಗೊತ್ತಿದೆ. ರಾಮಲಿಂಗಾರೆಡ್ಡಿಯವರು ರಾಜಕೀಯ ಲಾಭಕ್ಕಾಗಿ ಏನೂ ಬೇಕಾದರೂ ಹೇಳುತ್ತಾರೆ,”ಎಂದು ವ್ಯಂಗ್ಯವಾಡಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments