Tuesday, June 24, 2025
25.9 C
Bengaluru
Google search engine
LIVE
ಮನೆ#Exclusive Newsಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಕೆ.ಎಲ್.ರಾಹುಲ್ ಹೊಸ ಮೈಲುಗಲ್ಲು

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಕೆ.ಎಲ್.ರಾಹುಲ್ ಹೊಸ ಮೈಲುಗಲ್ಲು

ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 38 ರನ್​ ಕಲೆಹಾಕುವ ಮೂಲಕ ಕೆಎಲ್ ರಾಹುಲ್ ವಿಶೇಷ ಮೈಲುಗಲ್ಲು ದಾಟಿದ್ದಾರೆ.ಬಾಂಗ್ಲಾದೇಶ ವಿರುದ್ಧದ ಮೊದಲ ದಿನ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 376 ರನ್ ಕಲೆಹಾಕಿದ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ 287 ರನ್ ಗಳಿಸಿ ಡಿಕ್ಲೇರ್ ಘೋಷಿಸಿದೆ. ಈ ಮೂಲಕ ಬಾಂಗ್ಲಾದೇಶ ತಂಡಕ್ಕೆ ದ್ವಿತೀಯ ಇನಿಂಗ್ಸ್ ನಲ್ಲಿ 515 ರನ್​ಗಳ ಗುರಿ ನೀಡಿದೆ.

ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 16 ರನ್​ ಬಾರಿಸಿದ್ದ ರಾಹುಲ್, ದ್ವಿತೀಯ ಇನಿಂಗ್ಸ್​ನಲ್ಲಿ ಅಜೇಯ 22 ರನ್ ಕಲೆಹಾಕಿದರು.ಈ 22 ರನ್​ಗಳೊಂದಿಗೆ ಕೆಎಲ್ ರಾಹುಲ್ ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ 8000 ರನ್ ಪೂರೈಸಿದ್ದಾರೆ. ಈ ಮೂಲಕ ಇಂಟರ್​ನ್ಯಾಷನಲ್ ಕ್ರಿಕೆಟ್​ನಲ್ಲಿ 8 ಸಾವಿರ ರನ್ ಕಲೆಹಾಕಿದ ಭಾರತದ 17ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.ಟೀಮ್ ಇಂಡಿಯಾ ಪರ 50 ಟೆಸ್ಟ್ ಪಂದ್ಯಗಳಲ್ಲಿ 86 ಇನಿಂಗ್ಸ್ ಆಡಿರುವ ಕೆಎಲ್ ರಾಹುಲ್ 8 ಶತಕ ಹಾಗೂ 16 ಅರ್ಧಶತಕಗಳೊಂದಿಗೆ ಒಟ್ಟು 2863 ರನ್ ಕಲೆಹಾಕಿದ್ದಾರೆ. ಹಾಗೆಯೇ 72 ಏಕದಿನ ಇನಿಂಗ್ಸ್​ಗಳಿಂದ 7 ಶತಕ ಹಾಗೂ 18 ಅರ್ಧಶತಕಗಳೊಂದಿಗೆ 2851 ರನ್ ಬಾರಿಸಿದ್ದಾರೆ.ಇನ್ನು ಟೀಮ್ ಇಂಡಿಯಾ 72 ಟಿ20 ಪಂದ್ಯಗಳಲ್ಲಿ 68 ಇನಿಂಗ್ಸ್ ಆಡಿರುವ ಕೆಎಲ್ ರಾಹುಲ್ 2 ಶತಕ ಹಾಗೂ 22 ಅರ್ಧಶತಕಗಳೊಂದಿಗೆ ಒಟ್ಟು 2265 ರನ್ ಕಲೆಹಾಕಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಟ್ಟು 8 ಸಾವಿರ ರನ್ ಕಲೆಹಾಕಿದ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 376 ರನ್ ಕಲೆಹಾಕಿದ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ 287 ರನ್​ಗಳಿಸಿ ಡಿಕ್ಲೇರ್ ಘೋಷಿಸಿದೆ. ಅತ್ತ ಮೊದಲ ಇನಿಂಗ್ಸ್​ನಲ್ಲಿ ಕೇವಲ 149 ರನ್​ಗಳಿಗೆ ಆಲೌಟ್ ಆಗಿದ್ದ ಬಾಂಗ್ಲಾದೇಶ್ ತಂಡವು ಇದೀಗ ಮೊದಲ ಇನಿಂಗ್ಸ್ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 515 ರನ್​ಗಳ ಕಠಿಣ ಗುರಿ ಪಡೆದುಕೊಂಡಿದೆ.

 KL Rahul Kannada: 'ಅದು ಕನ್ನಡ್ ಅಲ್ಲ ಕನ್ನಡ..' ಮತ್ತೊಮ್ಮೆ ಕನ್ನಡಿಗರ ಹೃದಯ ಗೆದ್ದ  ಕೆ ಎಲ್ ರಾಹುಲ್..!

 

 

 

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments