Freedom TV

ಅಂಬೇಡ್ಕರ್​ ಸ್ಮರಿಸಿ, ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ ಮೋದಿ

ಇಂದು ಡಾ. ಬಿಆರ್​ ಅಂಬೇಡ್ಕರ್ ಅವರ ಸ್ಮರಣಾರ್ಥ ಇಡೀ ದೇಶವು ಮಹಾಪರಿನಿರ್ವಾಣ ದಿನವನ್ನು ಆಚರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅಂಬೇಡ್ಕರ್​ ಅವರನ್ನು ಸ್ಮರಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ಬಾಬಾ ಸಾಹೇಬ್ ಅವರು ಭಾರತೀಯ ಸಂವಿಧಾನದ ಸೃಷ್ಟಿಕರ್ತರಾಗಿ ಸಾಮಾಜಿಕ ಸಾಮರಸ್ಯಕ್ಕಾಗಿ ಅಮರ ಹೋರಾಟಗಾರರಾಗಿದ್ದರು, ಅವರು ಶೋಷಿತರು ಮತ್ತು ವಂಚಿತರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು ಎಂದು ಎಕ್ಸ್​ನಲ್ಲಿ ಪ್ರಧಾನಿ ಮೋದಿ ಬರೆದಿದ್ದಾರೆ.


ಇಂದು ಅವರ ಮಹಾಪರಿನಿರ್ವಾಣ ದಿನದಂದು ಅವರಿಗೆ ನನ್ನ ಗೌರವಪೂರ್ವಕ ನಮನಗಳು ಎಂದಿದ್ದಾರೆ. ಡಾ. ಭೀಮರಾವ್ ರಾಮ್‌ಜಿ ಅಂಬೇಡ್ಕರ್ ಅವರ ಸ್ಮರಣಾರ್ಥ ಭಾರತವು ಡಿಸೆಂಬರ್ 6 ರಂದು ಮಹಾಪರಿನಿರ್ವಾಣ ದಿನವನ್ನು ಆಚರಿಸುತ್ತದೆ .14 ಏಪ್ರಿಲ್ 1891 ರಂದು, ಸಂವಿಧಾನದ ಪಿತಾಮಹ ಎಂದು ಕರೆಯಲ್ಪಡುವ ಭಾರತೀಯ ಸಂವಿಧಾನವನ್ನು ರಚಿಸಿದ ಬಿ.ಆರ್ ಅಂಬೇಡ್ಕರ್ ಜನಿಸಿದರು.
ಲಿಂಗ ಸಮಾನತೆಯನ್ನು ಉತ್ತೇಜಿಸಿದರು ಮತ್ತು ದೇಶಾದ್ಯಂತ ದಲಿತರ ಆರ್ಥಿಕ ಮತ್ತು ಸಾಮಾಜಿಕ ಉನ್ನತಿಗಾಗಿ ಶ್ರಮಿಸಿದರು. ಸ್ವಾತಂತ್ರ್ಯದ ನಂತರ ಭಾರತೀಯ ಸಂವಿಧಾನವನ್ನು ರಚಿಸಿದ ಸಮಿತಿಯ ಏಳು ಸದಸ್ಯರಲ್ಲಿ ಒಬ್ಬರಾಗಿದ್ದರು.

Comments (0)

Your email address will not be published. Required fields are marked *

Back to top button