ಫ್ರಾನ್ಸ್ ಭೇಟಿಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 13, 2025 ರಂದು ಅಮೆರಿಕಕ್ಕೆ ಭೇಟಿ ನೀಡಿದ್ದಾರೆ. ಅಮೆರಿಕಾದಲ್ಲಿ ಪ್ರಧಾನಿ ಮೋದಿ ಅವರಿಗೆ ಅನಿವಾಸಿ ಭಾರತೀಯರಿಂದ ಅದ್ದೂರಿ ಸ್ವಾಗತ ದೊರಕಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಈ ಸಭೆಯಲ್ಲಿ ವ್ಯಾಪಾರ, ಭದ್ರತೆ, ರಕ್ಷಣಾ ಸಹಕಾರ ಮತ್ತು ವೀಸಾ ನೀತಿಯಂತಹ ಪ್ರಮುಖ ವಿಷಯಗಳ ಕುರಿತು ಚರ್ಚಿಸುವ ಸಾಧ್ಯತೆಯಿದೆ.
ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಧ್ಯಕ್ಷರಾಗಿ ಅಧಿಕಾರ ವಹಿಸದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಅಮೆರಿಕ ಭೇಟಿ ಇದಾಗಿದೆ. ಉಭಯ ನಾಯಕರ ಭೇಟಿಯಲ್ಲಿ ಯಾವೆಲ್ಲಾ ನಿರ್ಧಾರ ಕೈಗೊಳ್ಳಲಿದ್ದಾರೆ ಅನ್ನೋದು ಸದ್ಯ ಕುತೂಹಲದ ಸಂಗತಿಯಾಗಿದೆ.