ಮೈಸೂರು : ಮೈಸೂರು ತಾಲೂಕಿನ ಆಯರಹಳ್ಳಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾದ ಹಿನ್ನೆಲೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ತಾಯಿ ಚಿರತೆ ಸೆರೆಯಾಗಿದೆ.

ಗ್ರಾಮದ ದ್ಯಾವಣ್ಣನಾಯಕ ಎಂಬುವವರ ಜಮೀನಿನಲ್ಲಿ ಕಬ್ಬು ಕಟಾವು ಮಾಡುವ ವೇಳೆ ಚಿರತೆ ಮರಿಗಳು ಪತ್ತೆಯಾಗಿದ್ದವು. ಗ್ರಾಮದ ರೈತರು ಮೂರು ಮರಿಗಳನ್ನು ರಕ್ಷಿಸಿ ಅರಣ್ಯ ಇಲಾಖೆಗೆ ನೀಡಲಾಗಿತ್ತು. ತಾಯಿ ಚಿರತೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದ ಹಿನ್ನೆಲೆ ಕಬ್ಬಿನ ಗದ್ದೆಯಲ್ಲಿ ಅರಣ್ಯ ಇಲಾಖೆಯವರು ಬೋನು ಇರಿಸಿದ್ದರು. ಇಂದು ರಾತ್ರಿ ಮರಿಗಳನ್ನ ಹುಡುಕಿಕೊಂಡು ಬಂದ ತಾಯಿ ಚಿರತೆ ಬೋನಿಗೆ ಬಿದ್ದಿದೆ. ಚಿರತೆ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.



