ಬೆಂಗಳೂರು : ಆರೋಗ್ಯ ಇಲಾಖೆಯಿಂದ ಗುರುವಾರ ಒಟ್ಟು 262 ಹೊಸ ಆ್ಯಂಬುಲೆನ್ಸ್ ವಾಹನಗಳ ಲೋಕಾರ್ಪಣೆ ಮಾಡಲಾಯಿತು. ವಿಧಾನಸೌಧದ ಮುಂಭಾಗದಲ್ಲಿ ಹೊಸ ಆ್ಯಂಬುಲೆನ್ಸ್ ವಾಹನಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ರಾಜ್ಯದ ಆರೋಗ್ಯ ಇಲಾಖೆಯ 108 ಆ್ಯಂಬುಲೆನ್ಸ್ ಆರೋಗ್ಯ ಸೇವೆ ಬಲಪಡಿಸಲು 82.02 ಕೋಟಿ ರೂ. ವೆಚ್ಚದ 262 ಹೊಸ 108 ಆಂಬ್ಯುಲೆನ್ಸ್‌ಗಳಿಗೆ ಸಿಎಂ ನೂತನ ಆ್ಯಂಬುಲೆನ್ಸ್‌ಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಅರ್ಷದ್, ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಭಾಗಿಯಾಗಿದ್ದರು.