#Exclusive NewsTop Newsಜಿಲ್ಲೆಫ್ರೀಡಂ ಟಿವಿ ವಿಶೇಷರಾಜ್ಯವಿಶೇಷವೈರಲ್ ನ್ಯೂಸ್

ಇಂದಿನಿಂದ ಯದುವೀರ್ ಖಾಸಗಿ ದರ್ಬಾರ್!

ಇಂದಿನಿಂದ ಖಾಸಗಿ ದರ್ಬಾರ್ ಮೈಸೂರಿನಲ್ಲಿ ದಸರಾ ಮಹೋತ್ಸವ ಸಂಭ್ರಮ ಮನೆ ಮಾಡಿದರೆ, ಅರಮನೆಯಲ್ಲಿ ಶರನ್ನವರಾತ್ರಿ ಆಚರಣೆಯ ಸಡಗರ ಶುರುವಾಗಲಿದೆ. ರಾಜವಂಶಸ್ಥ ಯದುವೀರ ಒಡೆಯ‌ರ್ ಖಾಸಗಿ ದರ್ಬಾರ್ ನಡೆಸಲಿದ್ದಾರೆ. ಬೆಳಗ್ಗೆ ಚಾಮುಂಡಿ ತೊಟ್ಟಿಯಲ್ಲಿ ಯದುವೀರ ಅವರಿಗೆ ಕಂಕಣಧಾರಣೆ ಮಾಡಲಾಗುತ್ತದೆ. ಬೆಳಗ್ಗೆ 10.30ಕ್ಕೆ ಸವಾರಿ ತೊಟ್ಟಿಗೆ ಪಟ್ಟದ ಆನೆ, ಕುದುರೆ, ಹಸುಗಳು ಆಗಮಿಸಲಿವೆ. ಬೆಳಗ್ಗೆ 11ಕ್ಕೆ ಕಳಸ ಪೂಜೆ ಮತ್ತು ಸಿಂಹಾಸನ ಪೂಜೆ ನೆರವೇರಲಿದೆ. ಬೆ. 11.35 ರಿಂದ 12.05ರ ಒಳಗೆ ಯದುವೀರ ಅವರ ಸಿಂಹಾಸನಾರೋಹಣದ ಮೂಲಕ ಖಾಸಗಿ ದರ್ಬಾರ್ ಆರಂಭವಾಗಲಿದೆ.

Comments (0)

Your email address will not be published. Required fields are marked *

Back to top button