Tuesday, April 29, 2025
30.4 C
Bengaluru
LIVE
ಮನೆರಾಜ್ಯಈ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ....! ಎಚ್ಚರಿಕೆಯಿಂದಿರಿ...!

ಈ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ….! ಎಚ್ಚರಿಕೆಯಿಂದಿರಿ…!

ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಸಾಧಾರಣ ಮಳೆ ಯಾಗುತ್ತಿದೆ. ಸೋಮವಾರವೂ ಬನಶಂಕರಿ, ಜೆಪಿನಗರ, ಮೆಜೆಸ್ಟಿಕ್ ಸೇರಿ ಹಲವೆಡೆ ಮಳೆಯಾಗಿದೆ. ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಯಾದಗಿರಿ, ವಿಜಯಪುರ, ರಾಯಚೂರು, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.ಕಳೆದ 24 ಗಂಟೆಗಳಲ್ಲಿ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ ಮತ್ತು ಹಾವೇರಿಯಲ್ಲಿ ತಾಪಮಾನ ಹೆಚ್ಚಿತ್ತು. ಎಚ್ ಎ ಎಲ್ಫ್ ನಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಗಾಳಿಯು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments