Friday, September 12, 2025
21 C
Bengaluru
Google search engine
LIVE
ಮನೆ#Exclusive Newsಉಕ್ಕಿ ಹರಿದ ಸೊಟ್ಟೆ ಹಳ್ಳ.. ದಡದಲ್ಲಿ ರೈತರಿಂದ ವಿಶೇಷ ಪೂಜೆ.. ಏಕೆ ಗೊತ್ತಾ..?

ಉಕ್ಕಿ ಹರಿದ ಸೊಟ್ಟೆ ಹಳ್ಳ.. ದಡದಲ್ಲಿ ರೈತರಿಂದ ವಿಶೇಷ ಪೂಜೆ.. ಏಕೆ ಗೊತ್ತಾ..?

ಧಾರವಾಡ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಹಲವು ಅವಾಂತರಗಳು ಸೃಷ್ಟಿಯಾಗಿದ್ದು, ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಸುರಿದ ಬಾರಿ ಮಳೆಯಿಂದಾಗಿ ಹಿರೇಹರಕುಣಿ ಹಾಗೂ ಶಿಶುನಾಳ ಗ್ರಾಮದ ನಡವೆ ಸಂಚಾರ ಸ್ಥಗಿತವಾಗಿದೆ. ಸೊಟ್ಟ ಹಳ್ಳದ ನೀರಿನಿಂದಾಗಿ ಗ್ರಾಮಸ್ಥರು ಹಾಗೂ ರೈತರು ಪರದಾಡುತ್ತಿದ್ದು, ಶಿಗಿ ಹುಣ್ಣಿಮೆ ಹಿನ್ನೆಲೆ ಜಮೀನಿಗೆ ತೆರಳಬೇಕಿದ್ದ ರೈತರು ಹಳ್ಳದ ದಡದಲ್ಲಿಯೇ ಪೂಜೆ ಸಲ್ಲಿಸಿ ಮರಳುವ ಸ್ಥಿತಿ ನಿರ್ಮಾಣವಾಗಿದೆ. ಹೌದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇಹರಕುಣಿ ಹಾಗೂ ಶಿಶುನಾಳ ಗ್ರಾಮದ ನಡುವೆ ಬರುವ ಸೊಟ್ಟ ಹಳ್ಳಕ್ಕೆ ಮಳೆ ನೀರು ತುಂಬಿ ಬಂದಿದ್ದು, ಎರಡು ಗ್ರಾಮದ ಸಂಚಾರ ಸಂಪೂರ್ಣ ಬಂದಾಗಿದೆ. ಹಳ್ಳವು ಎರಡು ಗ್ರಾಮದ ಕೊಂಡಿಯಾಗಿರುವ ರಸ್ತೆಯ ಮೇಲೆ ಹಾದು ಹೋಗುವುದರಿಂದ ಹಳ್ಳದ ನೀರು ರಸ್ತೆಯ ಆವರಿಸಿಕೊಂಡಿದೆ. ಇದರಿಂದಾಗಿ ಇಂದು ಶಿಗಿ‌ ಹುಣ್ಣಿಮೆಗೆ ರೈತರು ತಮ್ಮ ಜಮೀನುಗಳಿಗೆ ತೆರಳಿ ಪೂಜೆ ಸಲ್ಲಿಸಬೇಕಾಗಿತ್ತು. ಆದರೆ ಹಳ್ಳ ತುಂಬಿದ್ದರಿಂದ ರೈತರು ತಮ್ಮ ಜಮೀನುಗಳಿಗೆ ತೆರಳಲಾಗದೆ. ಹಳ್ಳದ ದಡ್ಡದಲ್ಲಿಯೇ ಪೂಜೆ ಸಲ್ಲಿಸಿ ಮನೆಗೆ ಮರಳುವ ಸ್ಥಿತಿ ನಿರ್ಮಾಣವಾಗಿದೆ. ಜತೆಗೆ ಸರ್ಕಾರ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹಳ್ಳದಿಂದಾಗುತ್ತಿರುವ ಸಮಸ್ಯೆಯನ್ನು ತಪ್ಪಿಸಲು ಕ್ರಮ ಕೈಗೊಳ್ಳಲು ರೈತರು ಒತ್ತಾಯ ಮಾಡುತ್ತಿದ್ದಾರೆ.‌

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments