ದಟ್ಟ ಮಂಜು ಕವಿದಿದ್ದ ಕಾರಣ ವೇಗವಾಗಿ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಶುಕ್ರವಾರ ಸಂಜೆಯಷ್ಟೇ ಮದುವೆಯಾಗಿದ್ದ ನವಜೋಡಿ ಬಿಜ್ನೋರ್‌ನ ಧಂಪುರದಲ್ಲಿರುವ ವರನ ಮನೆಗೆ ಹಿಂತಿರುಗುತ್ತಿದ್ದ ವೇಳೆ ಘಟನೆ ನಡೆದಿದೆ.ಶನಿವಾರ ಮುಂಜಾನೆ ಘಟನೆ ನಡೆದಿದೆ.ಮದುವೆ ಮುಗಿಸಿ ವರನ ಮನೆಗೆ ತೆರಳುತ್ತಿದ್ದ ವೇಳೆ ಕಾರು ಆಟೋ ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ನವ ವಿವಾಹಿತ ಜೋಡಿ ಸೇರಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿಘಟನೆ ನಡೆದಿದೆ.
ಘಟನೆ ನಡೆದ ಸಂದರ್ಭ ಕಾರಿನಲ್ಲಿ ನವದಂಪತಿ ಸೇರಿದಂತೆ ಇತರೆ ಸಂಬಂಧಿಕರು ಪ್ರಯಾಣಿಸುತ್ತಿದ್ದರು. ಅಪಘಾತದ ಪರಿಣಾಮ ನವಜೋಡಿ ಸೇರಿ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.ಘಟನೆಯಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾಥಿಸಿದ್ದಾರೆ.