ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ ಹಿನ್ನೆಲೆ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಗಡ ತಾಲೂಕಿನ ಶಿನೋಳಿ ಬಳಿ ಎಂಇಎಸ್, ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ನಾಡದ್ರೋಹಿ ಘೋಷಣೆ ಕೂಗಿ ಕರ್ನಾಟಕ ಸರ್ಕಾರ, ಮಹಾರಾಷ್ಟ್ರ ಸರ್ಕಾರ ಹಾಗೂ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ನಾಡದ್ರೋಹಿ ಎಂಇಎಸ್‌ಗೆ ಶಿವಸೇನೆ ಉದ್ಧವ್ ಠಾಕ್ರೆ ಬಣದ ಕೊಲ್ಹಾಪುರ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ಸಾಥ್ ನೀಡಿದರು.

ಬೆಳಗಾವಿಯಲ್ಲಿ ಮಹಾಮೇಳಾವ್ ಆಯೋಜಿಸಲು ಎಂಇಎಸ್ ಪ್ರಯತ್ನ ನಡೆಸಿತ್ತು. ಆದ್ರೆ ಜಿಲ್ಲಾಡಳಿತ ಎಂಇಎಸ್ ಮಹಾಮೇಳಾವ್‌ಗೆ ನಿಷೇಧ ಹೇರಿದ ಹಿನ್ನೆಲೆ ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿ ಎಂಇಎಸ್ ಶಿವಸೇನೆ ಪುಂಡರ ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಮಹಾರಾಷ್ಟ್ರ ಸಂಪರ್ಕಿಸುವ ರಸ್ತೆ ತಡೆದು ಎಂಇಎಸ್ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನ ವಿರೋಧಿ ಎಂಇಎಸ ಮತ್ತು ಶಿವಸೇನೆ ಯಿಂದ ಗಡಿಯಲ್ಲಿ ಕ್ಯಾತೆ ತೆಗೆದ ಹಿನ್ನೆಲೆ ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿ ಬೀಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.


