Top News

ಕಲಬುರಗಿಗೆ ಇಂದು ಪ್ರಧಾನಿ ಮೋದಿ..! | Freedom TV

ಕಲಬುರಗಿಗೆ ಇಂದು ಪ್ರಧಾನಿ ಮೋದಿ..!

ಖರ್ಗೆ ಕೋಟೆಗೆ ಇಂದು ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರಿ ಸಿದ್ದತೆಗಳಾಗಿವೆ.
ಕಲಬುರಗಿಯಲ್ಲಿ ಇಂದು ಮೋದಿ ಅಬ್ಬರದ ಪ್ರಚಾರ ಮಾಡಲಿದ್ದಾರೆ. ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಪ್ರಧಾನಿ ಭಾಗಿಯಾಗಲಿದ್ದಾರೆ. ನಗರದ ಎನ್. ವಿ. ಮೈದಾನದಲ್ಲಿ ಈ ಸಮಾವೇಶ ಆಯೋಜನೆ ಮಾಡಲಾಗಿದೆ. ಇದಕ್ಕಾಗಿ ಈಗಾಗಲೇ ಬೃಹತ್ ವೇದಿಕೆ ಸಿದ್ದಗೊಂಡಿದೆ. ಸಮಾವೇಶಕ್ಕೂ ಮುನ್ನ ಮೋದಿ ಮಿನಿ ರೋಡ್ ಶೋ ನಡೆಸಲಿದ್ದಾರೆ. ನಗರದ ಡಿಎಆರ್ ಪೊಲೀಸ್ ಪರೇಡ್ ಹೆಲಿಪ್ಯಾಡ್ ನಿಂದ ಎನ್ ವಿ ಮೈದಾನದ ವರೆಗೂ ಈ ರೋಡ್ ಶೋ ನಡೆಯಲಿದೆ. ಸಮಾವೇಶದಲ್ಲಿ ಲಕ್ಷಾಂತರ ಜನರ ಭಾಗಿಯಾಗುವ ಸಾಧ್ಯತೆ ಇದೆ. ಕಲಬುರ್ಗಿಯಿಂದಲೇ ಚುನಾವಣಾ ಪ್ರಚಾರಕ್ಕೆ ಮೋದಿ ಚಾಲನೆ ನೀಡಲಿದ್ದಾರೆ.ಕಳೆದ ಸಲ ಕೂಡ ಕಲಬುರ್ಗಿಯಿಂದಲೇ ಚುನಾವಣೆ ಪ್ರಚಾರಕ್ಕೆ ಮೋದಿ ಚಾಲನೆ ನೀಡಿದ್ದರು. ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ಹೆಲಿಕ್ಯಾಪ್ಟರ್ ಮುಖಾಂತರ ಡಿಎಆರದ ಪೊಲೀಸ್ ಪರೇಡ್ ಮೈದಾನದ ಬಳಿಯ ಹೆಲಿಪ್ಯಾಡ್ ಗೆ ಮೋದಿ ಬರಲಿದ್ದಾರೆ.ಅಲ್ಲಿಂದ ರಸ್ತೆ ಮಾರ್ಗವಾಗಿ ಮಿನಿ ರೋಡ್ ಶೋ ಮುಖಾಂತರ ಸಮಾವೇಶ ಸ್ಥಳಕ್ಕೆ ಮೋದಿ ಆಗಮಿಸಲಿದ್ದಾರೆ.ಮೋದಿ ಆಗಮನ ಹಿನ್ನೆಲೆಯಲ್ಲಿ ನಗರದಲ್ಲಿ ಕಟೌಟ್ ಬ್ಯಾನರ್ ಗಳು ರಾರಾಜಿಸುತ್ತಿವೆ. ಈ ಹಿನ್ನೆಲೆಯಲ್ಲಿ ಕಲಬುರ್ಗಿ ವಿಮಾನ ನಿಲ್ದಾಣ, ಹೆಲಿಪ್ಯಾಡ್ ಹಾಗೂ ಸಮಾವೇಶ ನಡೆಯುವ ಸುತ್ತಲೂ 15 ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋಣ್ ಹಾರಾಟ ನಿಷೇಧಿಸಲಾಗಿದೆ

Comments (0)

Your email address will not be published. Required fields are marked *

Back to top button