ಕೊಡಗು
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂ. ಲಕ್ಷ್ಮಣ ಸ್ಪರ್ಧಿಸುವ ಎಲ್ಲಾ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಈಗಾಗಲೇ ಇವರ ಹೆಸರನ್ನು ಎ.ಐ.ಸಿ.ಸಿ.ಗೆ ಕಳುಹಿಸಿಕೊಡಲಾಗಿದ್ದು ಅಂತಿಮವಾಗಿ ಕಾಂಗ್ರೆಸ್ ಪಕ್ಷದಲ್ಲಿ ಎಂ ಲಕ್ಷ್ಮಣನವರೇ ಅಭ್ಯರ್ಥಿಯಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಇತ್ತ ಭಾರತೀಯ ಜನತಾ ಪಕ್ಷದಿಂದ ಹಾಲಿ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ರವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಆದರೆ ಕ್ಷೇತ್ರದಲ್ಲಿ ಅವರ ಬಗೆ ದ್ವಂದ್ವ ನೀಲುವಿದ್ದು ಕಾಂಗ್ರೆಸ್ ಅಭ್ಯರ್ಥಿಯ ರಾಜಕೀಯ ತಂತ್ರಗಾರಿಕೆ ಮೇಲುಗೈ ಸಾಧಿಸಿದರೆ ಬಹುಷಃ ಈ ಬಾರಿ ಬಿಜೆಪಿ ಮೈಸೂರು ಕೊಡಗು ಲೋಕಸಭಾ ಕ್ಷೇತ್ರವನ್ನು ಕಳೆದುಕೊಳ್ಳುವ ಸಾಧ್ಯತೆವಿದ್ದು ಈಗಾಗಲೇ ಎರಡು ಪಕ್ಷದಲ್ಲಿ ಜಿದ್ದಾಜಿದ್ದಿನ ಚುನಾವಣೆ ನಡೆಸಲು ಸಿದ್ಧತೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಪ್ರತಾಪ ಸಿಂಹ ಪರವಾಗಿರುವ ಅವರ ಪಕ್ಷದ ಕೊಡಗು ಜಿಲ್ಲೆಯ ಕೆಲವು ನಾಯಕರುಗಳೇ ಅವರಿಗೆ ತೊಡಕಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು ಇದನ್ನ ಅರಿತ ಪ್ರತಾಪ ಸಿಂಹ ರವರು ಮತ್ತೊಂದು ತಂತ್ರಗಾರಿಕೆಯಲ್ಲಿ ಚುನಾವಣೆಯಲ್ಲಿ ಎದುರಿಸಲು ಸಿದ್ದರಾಗಿದ್ದಾರೆ. ಮೋದಿ ಪರ ಅಲೆ ಕ್ಷೇತ್ರದಲ್ಲಿ ಇದುವರೆಗೆ ಇದ್ದು ಬಿಜೆಪಿ ತನ್ನ ಸ್ಥಾನವನ್ನು ಉಳಿಸಿಕೊಳ್ಳುತ್ತದೆ ಎಂಬ ಭರವಸೆ ಕಾರ್ಯಕರ್ತರಲ್ಲಿ ಮೂಡಿದೆ.