ಚಿತ್ರದುರ್ಗ : ಬಿಜೆಪಿಯಿಂದ ಕಾಂಗ್ರೆಸ್ ಸೇರಿ ಮೊದಲ ಬಾರಿಗೆ ಕಾಂಗ್ರೆಸ್ ಕಚೇರಿಗೆ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಭೇಟಿ ನೀಡಿದರು. ಕಾಂಗ್ರೆಸ್ ಜಿಲ್ಲಾ ಸಮಿತಿಯಿಂದ ಮಾಜಿ ಶಾಸಕಿ ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಶ್ರೀನಿವಾಸ್ಗೆ ಅದ್ದೂರಿ ಸ್ವಾಗತ ಕೋರಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮೇಲುಗೈ ತರೋಣ, ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ, ನಿಮ್ಮೆಲ್ಲರ ಸಹಕಾರವಿರಲಿ ಎಂದು ಕಾಂಗ್ರೆಸ್ ಮುಖಂಡರಲ್ಲಿ ಮಾಜಿ ಶಾಸಕಿ ಪೂರ್ಣಿಮಾ ಮನವಿ ಮಾಡಿದರು.

ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಟಿ ಶ್ರೀನಿವಾಸ್ ಹೇಳಿಕೆ ರಾಜ್ಯದಲ್ಲಿ ಪ್ರವರ್ಗ 1 ರ ಸಂಘಟನೆ ಕಟ್ಟಿ ರಾಜ್ಯ ಸುತ್ತಿದ್ದೇನೆ. ಸಣ್ಣ ಸಣ್ಣ ಸಮಾಜಗಳನ್ನು ಇದರಡಿಯಲ್ಲಿ ತಂದಿದ್ದೇವೆ. 5 ಲಕ್ಷ ಸದಸ್ಯರನ್ನು ಒಳಗೊಂಡಿರುವ ಪ್ರವರ್ಗ 1 ದೇವರಲ್ ಸಮಾಜವನ್ನು ಗುರುತಿಸಿ ಅವರಿಗೆ ಪ್ರತ್ಯೇಕ ಸ್ಥಾನ ಕೊಡಿಸುವ ನಿಟ್ಟಿನಲ್ಲಿ ಹೋರಾಡುತ್ತೇವೆ. ತಮಿಳು ನಾಡು, ತೆಲಂಗಾಣದಲ್ಲಿ ಪ್ರತ್ಯೇಕ ಸ್ಥಾನ ಹಾಗೂ ಬಜೆಟ್ನಲ್ಲೂ ಅನುದಾನ ನೀಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಕೂಡ ಇದಕ್ಕಾಗಿ ಒತ್ತಾಯಿಸಲಾಗುತ್ತದೆ ಎಂದು ಹೇಳಿದರು.


