ಜಿಲ್ಲೆ

ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು-ನಿಖಿಲ್​ ಕುಮಾರಸ್ವಾಮಿ ಏನಂದ್ರು..?

ರಾಜ್ಯದ ಜನರ ಹಾರೈಕೆಯಿಂದ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಅವರು ಗುಣಮುಖರಾಗಿದ್ದಾರೆ ಎಂದು ಇವತ್ತು (ಸೋಮವಾರ) ಮಂಡ್ಯದಲ್ಲಿ ಜೆಡಿಎಸ್​ ಯುವ ನಾಯಕ ನಿಖಿಲ್​ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಕುಮಾರಸ್ವಾಮಿ ಅವರು ಆರೋಗ್ಯವಾಗಿದ್ದಾರೆ,ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಒಂದು ತಿಂಗಳಿಂದ ಕುಮಾರಸ್ವಾಮಿ ಎಲ್ಲೂ ಬಹಿರಂಗವಾಗಿ ಕಾಣಿಸಿಕೊಂಡಿರಲಿಲ್ಲ.ಸಾರ್ವಜನಿಕ ಹಾಗೂ ಸರ್ಕಾರಿ ಕಾರ್ಯಕ್ರಮದಿಂದ ಅಂತರ ಕಾಯ್ದುಕೊಂಡಿದ್ದ ಕೇಂದ್ರ ಸಚಿವ.ಕೆಲ ದಿನಗಳ ಹಿಂದೆಯಷ್ಟೇ ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ರಾಜ್ಯಕ್ಕೆ ಹಿಂದಿರುಗಿದ್ದಾರೆ ಹೆಚ್​ಡಿಕೆ..ಸದ್ಯ ವೈದ್ಯರ ಸಲಹೆಯಂತೆ ಎಲ್ಲೂ ಹೊರಗಡೆ ಓಡಾಡುತ್ತಿಲ್ಲ ಹೆಚ್​.ಡಿ.ಕುಮಾರಸ್ವಾಮಿ.

ಈ ಬಗ್ಗೆ ಕಳೆದ ಮೂರು ದಿನಗಳ ಹಿಂದೆ ಕೇಂದ್ರ ಸಚಿವ ಕುಮಾರಸ್ವಾಮಿ ಎಲ್ಲಿ ಎಂಬ ಶೀರ್ಷಿಕೆಯಡಿ ನಿಮ್ಮ ಫ್ರೀಡಂ ಟಿವಿ ಸುದ್ದಿ ಬಿತ್ತರ ಮಾಡಿತ್ತು. ಈ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ ಅವರು ಹೆಚ್​ ಡಿಕೆ ಆರೋಗ್ಯದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಇದರ ನಡುವೆಯೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ದೆಹಲಿ ಕಡೆ ಮುಖ ಮಾಡಿದ್ದಾರೆ.

Comments (0)

Your email address will not be published. Required fields are marked *

Back to top button