Wednesday, April 30, 2025
29.2 C
Bengaluru
LIVE
ಮನೆ#Exclusive Newsಕುಮಾರಸ್ವಾಮಿ ಹಿಟ್ ಎಂಡ್ ರನ್ ಗಿರಾಕಿ-ಸಿಎಂ ಸಿದ್ದರಾಮಯ್ಯ

ಕುಮಾರಸ್ವಾಮಿ ಹಿಟ್ ಎಂಡ್ ರನ್ ಗಿರಾಕಿ-ಸಿಎಂ ಸಿದ್ದರಾಮಯ್ಯ

ಮೈಸೂರಿನ  ಪ್ರವಾಸದ ವೇಳೆ  ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಸರಾ ಹಾಗೂ ಮುನಿರತ್ನ ಕೇಸ್ ಕುರಿತು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದರು. ಹೆಸರಾಂತ ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ. ಜಿಲ್ಲಾಡಳಿತ, ಮೈಸೂರು ಉಸ್ತುವಾರಿ ಸಚಿವರಾದ ಎಚ್.ಸಿ.ಮಹದೇವಪ್ಪ ಅವರಿಗೆ ಆಹ್ವಾನ ನೀಡಲಿದ್ದಾರೆ. ಶಾಸಕ ಮುನಿರತ್ನ ಅವರ ಮೇಲೆ ಮೂರು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಎಸ್.ಐ ಟಿಗೆ ವಹಿಸಬೇಕೆಂದು ಇಂದು ಒಕ್ಕಲಿಗ ಸಮುದಾಯದ ಸಚಿವರು ಹಾಗೂ ಶಾಸಕರು ಮನವಿ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಅವರೊಂದಿಗೆ ಮಾತನಾಡಿ ತೀರ್ಮಾನಿಸುತ್ತೇವೆ. ಈ ಬಾರಿ ರಾಜ್ಯದಲ್ಲಿ 60,000 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯಾಗಿತ್ತು. ದಾವಣಗೆರೆಯಲ್ಲಿ ಕಲ್ಲು ತೂರಾಟ ನಡೆದಿದ್ದು, ನಾಗಮಂಗಲದಲ್ಲಿ ಗಲಭೆ ನಡೆದಿದ್ದು  ಅಲ್ಲಿ  ಪೊಲೀಸರ ಕರ್ತವ್ಯ ಲೋಪ ಕಂಡುಬಂದಿದ್ದು, ಡಿ.ವೈ.ಎಸ್.ಪಿ ಅವರನ್ನು ಅಮಾನತು ಮಾಡಲಾಗಿದೆ. ಕೋಮು ಗಲಭೆಗಳಿಗೆ ಬಿಜೆಪಿ ಪ್ರಚೋದನೆ ನೀಡುತ್ತಿದೆ. ಸಮಾಜದ ಶಾಂತಿಗೆ ಭಂಗವುಂಟುಮಾಡುವುದು ಬಿಜೆಪಿಯ ಮುಖ್ಯ ಉದ್ದೇಶವಾಗಿದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪರವರ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣದಲ್ಲಿ ತನಿಖೆಗೆ ಆದೇಶವಾಗಿದೆ, ಆದರೆ 2021 ಲೋಕಾಯುಕ್ತದವರು ತನಿಖೆ ಮಾಡಿಲ್ಲ. ನಿನ್ನೆ ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಸಂತೋಷ್ ಲಾಡ್ ಸೇರಿದಂತೆ ನಮ್ಮ ಸಚಿವರು ಈ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಡಿನೋಟಿಫೈ ಪ್ರಕರಣದ ಜಮೀನು ಬಹಳ ಬೆಲೆಬಾಳುವಂಥದ್ದಾಗಿದ್ದು, ಕುಮಾರಸ್ವಾಮಿಯವರು ತಮ್ಮ ಸಂಬಂಧಿಕರಿಗೆ ಡಿನೋಟಿಫೈ ಮಾಡಿ, ಜಿಪಿಓ ಆಗಿದೆ. ಅಧಿಕಾರಿಗಳು ಈ ಕ್ರಮವನ್ನು ಕಾನೂನಾತ್ಮಕವಲ್ಲವೆಂದರೂ ಈ ರೀತಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪಡೆದು ಪರಿಶೀಲನೆ ನಡೆಸಲಾಗುವುದು. ವಿಪಕ್ಷಗಳು ಗಾಜಿನ ಮನೆಯಲ್ಲಿ ಕುಳಿತು ಸರ್ಕಾರದ ಮೇಲೆ ಆರೋಪ ಹೊರಸುತ್ತಿವೆ. ನಾವು ಯಾರ ಮೇಲೆಯೂ ಆರೋಪ ಹೊರಿಸುವ ಕೆಲಸವನ್ನು ಮಾಡುತ್ತಿಲ್ಲ. ಕುಮಾರಸ್ವಾಮಿಯವರು ಹಿಟ್ ಎಂಡ್ ರನ್ ಗಿರಾಕಿ, ಅವರು ತಮ್ಮ ಯಾವ ಆರೋಪಕ್ಕೂ ತಾರ್ಕಿಕ ಅಂತ್ಯ ಕಾಣಿಸುವುದಿಲ್ಲ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿದ್ದು, ಜವಾಬ್ದಾರಿಯುತವಾಗಿ ವರ್ತಿಸಬೇಕು. ವಿಷಯದ ಸತ್ಯಾಸತ್ಯತೆಯನ್ನು ಅರಿತು ಮಾತನಾಡಬೇಕು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments