ಮೈಸೂರು : ನೆರೆ ರಾಜ್ಯ ಕೇರಳದಲ್ಲಿ ಕೋವಿಡ್ ರೂಪಾಂತರಿ ವೈರಸ್ ಸೋಂಕಿನ ಕೇಸ್ ಹೆಚ್ಚಳ ಹಿನ್ನೆಲೆಯಲ್ಲಿ ಕರ್ನಾಟಕ ಗಡಿ ಭಾಗದ ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲೂ ಆರೋಗ್ಯ ಇಲಾಖೆ ಮುಂಜಾಗ್ರತೆ ವಹಿಸಿದೆ.
ಕೇರಳ ಕರ್ನಾಟಕ ಗಡಿ ಭಾಗದಲ್ಲಿ ತೀವ್ರ ನಿಗಾ ವಹಿಸಲಾಗಿದ್ದು, ಹೆಚ್ಡಿ ಕೋಟೆ ತಾಲೂಕಿನ ಆರೋಗ್ಯಧಿಕಾರಿ ಡಾ. ರವಿಕುಮಾರ್ ನೇತೃತ್ವದಲ್ಲಿ ವಾಹನ ತಪಾಸಣೆ ಮಾಡಲಾಗುತ್ತಿದೆ. ಕರ್ನಾಟಕ ಕೇರಳ ಗಡಿಯಲ್ಲಿ ಕರಪತ್ರ ಹಂಚಿ ಅರಿವು ಮೂಡಿಸಲಾಗುತ್ತಿದೆ. ಕೇರಳಕ್ಕೆ ಹೋಗಿ ಬಂದವರಲ್ಲಿ ಕೋವಿಡ್ ಲಕ್ಷಣ ಕಂಡುಬಂದಲ್ಲಿ ಆಸ್ಪತ್ರೆಗೆ ಹೋಗಿ ಕೋವಿಡ್ ಪರೀಕ್ಷೆ ಮಾಡಿಸುವಂತೆ ಸೂಚಿಸಲಾಗಿದೆ. ಕೋವಿಡ್ ಸೋಂಕಿತರ ಮೇಲೆ ನಿಗಾ ವಹಿಸಲು ಎರಡು ತಂಡಗಳ ರಚನೆ ಮಾಡಿದ್ದು, ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಮುಂದಾಗಿದೆ.