ಮಂಗಳೂರು:ಸ್ಯಾಂಡಲ್‌ವುಡ್ ನಟ ನಟಿಯರು ಮಂಗಳೂರಿನ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ಕೊಟ್ಟು ದರ್ಶನ ಪಡೆದಿದ್ದಾರೆ. ಈ ಸಾಲಿಗೆ ಈಗ ದರ್ಶನ್ ಸೇರಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂಗಳೂರಿನ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಕೊರಗಜ್ಜ ದೈವ ದೇವರಿಗೆ ಡಿಬಾಸ್ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ದರ್ಶನ್ ಭೇಟಿ ನೀಡಿದ್ದ ವೇಳೆ, ಕೊರಗಜ್ಜ ಕ್ಷೇತ್ರದ ವತಿಯಿಂದ ದರ್ಶನ್‌ಗೆ ಗೌರವ ಸಲ್ಲಿಸಿದ್ದಾರೆ. “ಮೊದಲ ಬಾರಿಗೆ ಕುತ್ತಾರು ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿದ್ದೇನೆ. ಹಿಂದೆ ಮಂಗಳೂರಿಗೆ ಸುಮಾರು ಬಾರಿ ಬಂದಿದ್ದೇನೆ. ಆದರೆ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿರಲಿಲ್ಲ. ಹಾಗೆ ನೋಡಿಕೊಂಡು ಹೋಗೋಣ ಅಂತ ಬಂದಿದ್ದೀನಿ ಎಂದು ಹೇಳಿದ್ದಾರೆ.