ಜಲಮಂಡಳಿ : ಕೊಳವೆ ಬಾವಿ ಕೊರೆಸಲು ಅನುಮತಿ ಕಡ್ಡಾಯ ,ಅನುಮತಿ ಇಲ್ಲದೆ ಕೊಳವೆ ಬಾವಿ ಕೊರೆದಿದ್ದೆ ಆದಲ್ಲಿ ಜಲಮಂಡಳಿ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ಎಚ್ಚರಿಸಿದೆ. ನೀವು ಅನುಮತಿ ಪಾತ್ರದಲ್ಲಿ ತಿಳಿಸಿರುವ ಜಾಗದಲ್ಲೇ ಕೊರೆಯತಕ್ಕದ್ದು.
ಅಂತರ್ಜಲವನ್ನು ಸರಿಯಾದ ಕ್ರಮದಲ್ಲಿ ಸದ್ಬಳಕೆ ಮಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈ ತೀರ್ಮಾನ ತೆಗೆದುಕೊಂಡು ಆದೇಶ ಹೊರಡಿಸಿರುವ ಮಂಡಳಿಯು ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) ಅಧಿನಿಯಮ 2011ರ ಕಂಡಿಕೆ 17 ರ ಅಧಿಕಾರದನ್ವಯ ನಿಯಮಾನುಸಾರ ರಿಗ್ ಪಡೆಯಲು ನೀಡಿರುವ ಅನುಮತಿಯನ್ನು ಕೂಡಲೇ ರದ್ದುಪಡಿಸಲು ಕ್ರಮವಹಿಸುವುದು ಮತ್ತು ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ತಿಳಿಸಿದ್ದಾರೆ.
ಜೊತೆಗೆ ಇನ್ನು ಮುಂದೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನೆ ಹಾಗೂ ನಿಯಂತ್ರಣ) ಅಧಿನಿಯಮ 2011ರ ಕಂಡಿಕೆ 11 ರನ್ವಯ ಎಲ್ಲಾದರು ಸಂಬಂಧಪಟ್ಟ ಪ್ರಾಧಿಕಾರಿಯಿಂದ ಅನುಮತಿ ಪಡೆಯದೇ ಕೊಳವೆ ಬಾವಿಗಳನ್ನು ಕೊರೆದಲ್ಲಿ ಕೊಳವೆಬಾವಿಯನ್ನು ಕೊರೆಸುವ ಮಾಲೀಕರ ವಿರುದ್ಧ ನಿಯಮ ಉಲ್ಲಂಘನೆ ಮಾಡಿರುವುದ್ದಾಗಿ ದೂರು ಹಾಗೂ ಅಂತವರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ವಿವರಿಸಿದ್ದಾರೆ.ಈ ಆದೇಶವು ಇದೇ ಮಾ.15 ರಿಂದ ಜಾರಿಗೆ ಬರಲಿದೆ. ಮಾ.15 ರಿಂದ ಬೆಂಗಳೂರು ಜಲಮಂಡಳಿ ಜಾಲತಾಣದಲ್ಲಿ ಕೊಳವೆಬಾವಿ ಕೊರೆಸಲು ಅನುಮತಿ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.