ಬೆಂಗಳೂರು: ಕೋವಿಡ್ ಕಾಲದಲ್ಲಿ ಪಿಪಿಇ ಕಿಟ್ ಖರೀದಿಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದಲ್ಲಿ ಆರ್ಥಿಕ ಸಲಹೆಗಾರರಾಗಿದ್ದ ಪ್ರಸ್ತುತ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ಆರ್ಥಿಕ ಸಲಹೆಗಾರರಾಗಿದ್ದ ಜಿ.ಪಿ. ರಘು ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ರಘು ಅವರು ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದಲ್ಲಿ ಆರ್ಥಿಕ ಸಲಹೆಗಾರರಾಗಿದ್ದಾಗ ಸರಕಾರದ ಅನುಮೋದನೆ ಇಲ್ಲದೆ ಪಿಪಿಇ ಕಿಟ್ ಮತ್ತು ಇತರ ಸಾಮಗ್ರಿಗಳನ್ನು ಖರೀದಿಸಿರುವ ಹಾಗೂ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಉಲ್ಲಂ ಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಆರ್ಥಿಕ ಇಲಾಖೆಯ ಅಧೀನ ಕಾರ್ಯದರ್ಶಿ ನೇತ್ರಪ್ರಭಾ ಎಂ. ಅವರು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ.