ಮಂಗಳೂರು: ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದು ಒಬ್ಬ ವ್ಯಕ್ತಿಯನ್ನು ಬಂಧನ ಮಾಡಿದ್ದಾರೆ.

ಕಂಕನಾಡಿಯಲ್ಲಿ ಖೋಟಾ ನೋಟುಗಳ ಚಲಾವಣೆಗೆ ಪ್ರಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದು, ಆರೋಪಿಯನ್ನು ಮಂಜೇಶ್ವರದ ಕೀರ್ತೇಶ್ವರ ನಿವಾಸಿ ಪ್ರಶ್ವಿತ್ (25) ಎಂದು ಗುರುತಿಸಲಾಗಿದೆ.
500 ರೂಪಾಯಿ 200 ರೂಪಾಯಿ ಮತ್ತು 100 ರೂಪಾಯಿ ಮುಖ ಬೆಲೆಯ ಖೋಟಾ ನೋಟುಗಳನ್ನು ಚಲಾವಣೆ ಮಾಡಿದ್ದು, ಈವರೆಗೆ ಸುಮಾರು 8 ರಿಂದ 9 ಸಾವಿರ ರೂಪಾಯಿಗಳ ಖೋಟಾ ನೋಟುಗಳನ್ನು ಚಲಾವಣೆ ಮಾಡಿರುವುದನ್ನು ಪತ್ತೆ ಮಾಡಲಾಗಿದೆ. ಆರೋಪಿತನಿಂದ ನಕಲಿ ನೋಟುಗಳಾದ 500 ರೂ. ಮುಖಬೆಲೆಯ 3 ನೋಟುಗಳು, 200 ರೂ. ಮುಖಬೆಲೆಯ 2 ನೋಟು ಹಾಗೂ 100 ರೂ. ಮುಖಬೆಲೆಯ 3 ನೋಟುಗಳು ಹಾಗೂ ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.
ಆರೋಪಿಯಿಂದ ಎಂಟು ಖೋಟಾ ನೋಟುಗಳು, ಒಪೋ ಕಂಪನಿ ಮೊಬೈಲ್ ಫೋನ್ , 35 ಅಸಲಿ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. ಪತ್ತೆ ಕಾರ್ಯದಲ್ಲಿ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಮಾರ್ಗದರ್ಶನದಲ್ಲಿ ಮಂಗಳೂರು ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.