ನಾಗಮಂಗಲ ಗಣೇಶ ಮೇರವಣಿಗೆ ಘಟನೆಗೆ ಪ್ರಚೋದನೆ ನೀಡಿರುವುದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ .ಗಣಪತಿ ವಿಸರ್ಜನೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದು, ಕಿಡಿಗೇಡಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹೇಳಿದರು. ಅವರು ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದರು. ನಮ್ಮ ಸರ್ಕಾರದ ಗೃಹ ಮಂತ್ರಿಗಳು ಕೂಡ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ ಎಂದರು.ಸಿದ್ದರಾಮಯ್ಯ ಪರ ನ್ಯಾಯಾಲಯದಲದಲಿ ತೀರ್ಪು ಬರುವ ವಿಶ್ವಾಸವಿದೆ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಲಿದ್ದು,ಅವರಿಗೆ 136 ಶಾಸಕರ ಬೆಂಬಲವಿದೆ ಎಂದರು.