Freedom TV

ಗದಗ ಬಳಿ ಅಪಘಾತದಲ್ಲಿ ಮೂವರ ಸಾವು

ಗದಗ…
ಟ್ಯಾಂಕರವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮವಾಗಿ ಮೂವರು ಮೃತಪಟ್ಟು ಇನ್ನಿಬ್ಬರು ಗಾಯಗಂಡ ಅವಗಡ ಗದಗ ಬಳಿ ಜರುಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಈ ದುರ್ಘಟನೆಗೆ ಕಾರಣವಾದ ಟ್ಯಾಂಕರ್ ನಲ್ಲಿ ಶಾಮಿಯಾನ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ನವೀನ ಕುಂಬಾರ(23) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ನಾಗರಾಜ ಕಾಳಿ(22) ಹಾಗೂ ಗಂಗಾಧರ ಅಕ್ಕಿ(23), ಜೀಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತದ ನಂತರ ಟ್ಯಾಂಕರ್ ಚಾಲಕ ಪರಾರಿ ಆಗಿದ್ದಾನೆ. ಸುದ್ದಿ ತಿಳಿದು ಮುಂಡರಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Comments (0)

Your email address will not be published. Required fields are marked *

Back to top button