ದೇಶ/ವಿದೇಶ

ಗುಜರಾತ್ ಸಿಎಂ ವಿಜಯ್ ರೂಪಾನಿ ಸೇರಿ 241 ಮಂದಿ ಪ್ರಯಾಣಿಕರು ಸುಟ್ಟು ಕರಕಲು!

ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದ್ದು, 242 ಜನರು ಪ್ರಯಾಣಿಸುತ್ತಿದ್ದರು. ಈ ವಿಮಾನದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಇದ್ದರು. ಲಂಡನ್​ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆಗುವಾಗ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿದೆ.  ಪ್ರಯಾಣಿಕರ ಪಟ್ಟಿಯಲ್ಲಿ ವಿಜಯ್ ರೂಪಾನಿ ಹೆಸರಿದೆ..

ವಿಮಾನ ಮಧ್ಯಾಹ್ನ 1.17 ಕ್ಕೆ ಟೇಕ್ ಆಫ್ ಆಗಿತ್ತು. ವಿಮಾನ ನಿಲ್ದಾಣದ ಬಳಿಯ ಸರಕು ಕಚೇರಿಯಲ್ಲಿ ಅಪಘಾತ ಸಂಭವಿಸಿದ್ದು, ಇದರಿಂದಾಗಿ ಕಟ್ಟಡವೂ ಸಂಪೂರ್ಣವಾಗಿ ಹಾನಿಗೊಳಗಾಗಿದೆ. ಇಲ್ಲಿಯವರೆಗೆ ಬಂದಿರುವ ಮಾಹಿತಿಯ ಪ್ರಕಾರ, ವಿಮಾನದಲ್ಲಿದ್ದ 242 ಜನರಲ್ಲಿ ಇಬ್ಬರು ಪೈಲಟ್‌ಗಳು ಮತ್ತು 2 ಮಕ್ಕಳು ಸೇರಿದಂತೆ 8 ಸಿಬ್ಬಂದಿ ಇದ್ದರು. ವಿಮಾನದ ಪೈಲಟ್‌ನ ಹೆಸರು ಸುಮಿತ್ ಸಭರ್ವಾಲ್ ಎಂದು ಹೇಳಲಾಗುತ್ತಿದೆ. ವಿಮಾನ ಟೇಕ್ ಆಫ್ ಆದ ಕೇವಲ 1 ನಿಮಿಷದಲ್ಲಿ ಅಪಘಾತಕ್ಕೀಡಾಗಿದೆ. ಅದರ ವಿಡಿಯೋ ಕೂಡ ಹೊರಬಿದ್ದಿದೆ.

ವಿಮಾನ ಅಪಘಾತದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ, ಪ್ರಾಥಮಿಕ ವರದಿಗಳ ಪ್ರಕಾರ, ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದು, ಹಾಗೂ ತಾಂತ್ರಿಕ ದೋಷವೇ ಕಾರಣ ಎನ್ನಲಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಪ್ರಧಾನಿ ಹಾಗೂ ವಿಮಾನಯಾನ ಸಚಿವರು ಸಂತಾಪ ಸೂಚಿಸಿದ್ದು, ತನಿಖೆಗೆ ಆದೇಶ ನೀಡಿದ್ದಾರೆ.

Comments (0)

Your email address will not be published. Required fields are marked *

Back to top button