#Exclusive NewsTop Newsಉಪ ಚುನಾವಣೆಜಿಲ್ಲೆರಾಜಕೀಯರಾಜ್ಯಸುದ್ದಿ

ಚನ್ನಪಟ್ಟಣದ ಎನ್​ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಘೋಷಣೆ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿರುವ ಚನ್ನಪಟ್ಟಣ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಬಹುತೇಕ ಅಂತಿಮವಾಗಿದ್ದು, ಕಾರ್ಯಕರ್ತರ ಒತ್ತಡಕ್ಕೆ ಮಣಿದು ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ  ಘೋಷಿಸಿದ್ದಾರೆ.

ಇದರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸಿ.ಪಿ ಯೋಗೇಶ್ವರ್ ಅವರಿಗೆ ಎದುರಾಳಿ ಯಾರು ಅನ್ನೋ ಗೊಂದಲಕ್ಕೆ ತೆರೆ ಬಿದ್ದಿದೆ.

ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರೇ ಕಣಕ್ಕಿಳಿಯುವುದು ಬಹುತೇಕ ಫಿಕ್ಸ್ ಆಗಿದೆ. ಜೆಡಿಎಸ್ ವರಿಷ್ಠರು ಕಾರ್ಯಕರ್ತರ ಒತ್ತಡಕ್ಕೆ ಮಣಿದು ನಿಖಿಲ್ ಅವರನ್ನ ಮತ್ತೊಂದು ಅಗ್ನಿಪರೀಕ್ಷೆಯ ಕಣಕ್ಕಿಳಿಸಲು ರೆಡಿಯಾಗಿದ್ದಾರೆ.

ಚನ್ನಪಟ್ಟಣದಲ್ಲಿ NDA ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಕಣಕ್ಕಿಳಿಯೋ ಲೆಕ್ಕಾಚಾರ ಅಂತಿಮವಾಗಿದೆ. ಅಧಿಕೃತವಾಗಿ ಘೋಷಣೆ ಮಾಡುವುದು ಮಾತ್ರವೇ ಬಾಕಿ ಉಳಿದಿದೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಅವರು ಸಭೆ ನಡೆಸಿ, ನಂತರ ಅಧಿಕೃತವಾಗಿ ಎನ್ ಡಿಎ ಅಭ್ಯರ್ಥಿ ಘೋಷಣೆ ಮಾಡಲು ನಿರ್ಧಾರ ಮಾಡಿದ್ದಾರೆ.

Comments (0)

Your email address will not be published. Required fields are marked *

Back to top button