Tuesday, June 24, 2025
26.6 C
Bengaluru
Google search engine
LIVE
ಮನೆ#Exclusive Newsಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಪತ್ತೆ!!!

ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಪತ್ತೆ!!!

ಹಾವೇರಿ: ನಿನ್ನೆ ಸುರಿದ ಭೀಕರ  ಮಳೆಗೆ 12 ವರ್ಷದ ಬಾಲಕನೋಬ್ಬ ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ಘಟನೆ ಹಾವೇರಿ ನಗರದ ಎಸ್ಪಿ ಕಚೇರಿ ಮುಂಭಾಗ ನಡೆದಿತ್ತು. ಇದೀಗ ಆ ಬಾಲಕ ಪತ್ತೆಯಾಗಿದ್ದಾನೆ. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ಬಾಲಕನನ್ನು ಮೇಲೆತ್ತಿದ್ದಾರೆ.

ವೇದು ಎಂಬ ಬಾಲಕ ಸ್ನೇಹಿತರೊಂದಿಗೆ ಮಳೆ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಕೊಚ್ಚಿ ಹೋಗಿದ್ದಾನೆ. ಅಗ್ನಿಶಾಮಕ ದಳ ಸಿಬ್ಬಂದಿಗಳ ಸ್ಥಳಕ್ಕೆ ದೌಡಾಯಿಸಿ ಹುಡುಕಾಡಿದ್ದಾರೆ. ಈ ವೇಳೆ ಮೆಡಿಕಲ್ ಶಾಪ್ ಮುಂಭಾಗದಲ್ಲಿದ್ದ ಸ್ಲ್ಯಾಬ್​​ನಲ್ಲಿ ಪತ್ತೆಯಾಗಿದ್ದಾನೆ.

ಪತ್ತೆಯಾದ ಬಾಲಕನನ್ನು ಅಗ್ನಿಶಾಮಕ ಸಿಬ್ಬಂದಿ ಹಾಗೂ ಸಾರ್ವಜನಿಕರು ತಕ್ಷಣವೇ ಜಿಲ್ಲಾಸ್ಪತ್ರೆಗೆ ಹೊತ್ತು ಸಾಗಿಸಿದ್ದಾರೆ. ಆ್ಯಂಬುಲೆನ್ಸ್ ನಲ್ಲಿ ಕೃತಕ ಆಕ್ಸಿಜನ್ ಹಾಕಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ವೇಳೆ ಬಾಲಕ ಬದುಕಿದ್ದಾನೆಂದು ಸಿಬ್ಬಂದಿಗಳು ಹೇಳಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಪರಿಶೀಲನೆ ನಡೆಸಿದ ವೈದ್ಯರು ಬಾಲಕ ಸಾವನ್ನಪ್ಪಿದ್ದಾನೆ ಎಂದು ಹೇಳಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments