ಜಿಲ್ಲೆ

ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಹಲ್ಲೆ ಖಂಡಿಸಿ ಮೈಸೂರಿನಲ್ಲಿ ವಕೀಲರಿಂದ ಪ್ರೊಟೆಸ್ಟ್​​

ಮೈಸೂರು : ಚಿಕ್ಕಮಗಳೂರಿನಲ್ಲಿ ಹೆಲ್ಮೆಟ್ ವಿಚಾರಕ್ಕೆ ವಕೀಲರೊಬ್ಬರ ಮೇಲೆ ಪೊಲೀಸರಿಂದ ಹಲ್ಲೆ ಖಂಡಿಸಿ ಇಂದು ವಕೀಲರು ಕಲಾಪ ಬಹಿಷ್ಕರಿಸಿ ಮೈಸೂರಿನಲ್ಲಿ ಜಿಲ್ಲಾ ವಕೀಲರ ಸಂಘದಿಂದ ಪ್ರತಿಭಟನೆ ನಡೆಸಿದರು.


ಮೈಸೂರು ನ್ಯಾಯಾಲಯದ ಮುಂಭಾಗ ಗಾಂಧಿ ಪ್ರತಿಮೆ ಬಳಿ ವಕೀಲರಿಂದ ಪ್ರತಿಭಟನೆ ನಡೆಸಲಾಯಿತು ಕೋರ್ಟ್ ಕಲಾಪ ಬಹಿಷ್ಕರಿಸಿ ವಕೀಲರು ಧರಣಿ ನಡೆಸಿದ್ದು, ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರು ನ್ಯಾಯಾಲಯದ ಮುಂಭಾಗದಿಂದ ಪ್ರತಿಭಟನೆ ಮೆರವಣಿಗೆ ಹೊರಟು ರಾಮಸ್ವಾಮಿ ವೃತ್ತ ತಲುಪಿದ ವಕೀಲರು, ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

Comments (0)

Your email address will not be published. Required fields are marked *

Back to top button