Monday, June 23, 2025
26.6 C
Bengaluru
Google search engine
LIVE
ಮನೆಆರೋಗ್ಯಚೀನಾದಲ್ಲಿ ನ್ಯುಮೋನಿಯಾ; ರಾಜ್ಯದಲ್ಲಿ ಆರೋಗ್ಯ ಇಬ್ಬಂದಿಗೆ ಮಾಸ್ಕ್​​ ಕಡ್ಡಾಯ

ಚೀನಾದಲ್ಲಿ ನ್ಯುಮೋನಿಯಾ; ರಾಜ್ಯದಲ್ಲಿ ಆರೋಗ್ಯ ಇಬ್ಬಂದಿಗೆ ಮಾಸ್ಕ್​​ ಕಡ್ಡಾಯ

ಬೆಂಗಳೂರು:- ಚೀನಾದ ಉತ್ತರ ಭಾಗದ ಮಕ್ಕಳಲ್ಲಿ ಕಾಣಿಸಿಕೊಂಡ ನ್ಯುಮೋನಿಯಾ ಪ್ರಕರಣಗಳು ರಾಜ್ಯದಲ್ಲಿ ಪಸರಿಸದಂತೆ ತಡೆಯಲು ಆರೋಗ್ಯ ಇಲಾಖೆಯು ಮುನ್ನಚ್ಚರಿಕೆ ಕ್ರಮಗಳು ಹಾಗೂ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಆರೋಗ್ಯ ಸಿಬ್ಬಂದಿಗಳು ಮಾಸ್ಕ್​ ಧರಿಸುವುದು ಕಡ್ಡಾಯಗೊಳಿಸಲಾಗಿದೆ.


ಸೋಮವಾರ ನಡೆದ ಇಲಾಖೆಯ ರಾಜ್ಯ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ವ್ಯಕ್ತವಾರ ಅಭಿಪ್ರಾಯ ಆಧರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ.ರಂದೀಪ್​ ಅವರು ಮಂಗಳವಾರ ಸುತ್ತೋಲೆ ಹೊರಡಿಸಿದ್ದಾರೆ. ಸರ್ಕಾರಿ ಹಾಗೂ ಖಾಸಗಿ ಆರೋಗ್ಯ ಕೇಂದ್ರಗಳ ಸಿಬ್ಬಂದಿ ಮಾಸ್ಕ್​ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ನ್ಯುಮೋನಿಯಾ ಚಿಕಿತ್ಸೆಗೆ ಅಗತ್ಯವಿರುವ ಒಸೆಲ್ಟಾಮಿವಿರ್​​​ ಮಾತ್ರೆಗಳು ಹಾಗೂ ಆರೋಗ್ಯ ಕ್ಷೇತ್ರದ ಸಿಬ್ಬಂದಿಗೆ ಆಗತ್ಯವಿರುವಷ್ಟು ಪಿಪಿಇ ಕಿಟ್​ಗಳನ್ನು ದಾಸ್ತಾನು ಮಾಡಿಕೊಳ್ಳುವಂತೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
ಶೀತ ಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ ಹಾಗೂ ತೀವ್ರ ಉಸಿರಾಟದ ಸಮಸ್ಯೆಗಳುಳ್ಳ ಪ್ರಕರಣಗಳನ್ನು ಆರೋಗ್ಯ ಇಲಾಖೆಯು ಪೋರ್ಟಲ್​ನಲ್ಲಿ ಕಡ್ಡಾಯವಾಗಿ ದಾಖಲಿಸಬೇಕು. ಯಾವುದೇ ಪ್ರದೇಶಗಳಲ್ಲಿ ಈ ಪ್ರಕರಣಗಳ ಸಂಖ್ಯೆ ಅನಿಯಮಿತ ಪ್ರಮಾಣದಲ್ಲಿ ಹೆಚ್ಚಳವಾದರೆ ವಿಶೇಷ ನಿಗಾ ಇರಿಸಬೇಕು. ಇಂತಹ ಪ್ರಕರಣಗಳ ಪರೀಕ್ಷಾ ವರದಿಗಳ ಕುರಿತು ಆರೋಗ್ಯ ಇಲಾಖೆಯ ಪೋರ್ಟಲ್​ನಲ್ಲಿ ಮಾಹಿತಿ ದಾಖಲಿಸಬೇಕು ಎಂದು ಸುತ್ತೋಲೆಯಲ್ಲಿ ನಿರ್ದೇಶನ ನೀಡಲಾಗಿದೆ.

ಕೋವಿಡ್​​ ನಿಯಂತ್ರಣಕ್ಕೆ ಈ ಹಿಂದೆ ಹೊರಡಿಸಿದ್ದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕೋವಿಡ್​​ ಚಿಕಿತ್ಸೆಗೆ ನಿಗದಿಪಡಿಸಿದ್ದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಸನ್ನದ್ಧತೆ ಕುರಿತು ಪರಿಶೀಲನೆ ನಡೆಸಬೇಕು. ಹಾಸಿಗೆಗಳ ಲಭ್ಯತೆ, ವೈದ್ಯರು, ಅರೆವೈದ್ಯಕೀಯ ಮತ್ತು ಇತರ ಸಿಬ್ಬಂದಿಯ ಲಭ್ಯತೆ, ಪಿಪಿಇ ಕಿಟ್​​, ಆಮ್ಲಜನಕ, ಔಷಧಿಗಳ ದಾಸ್ತಾನಿನ ಕುರಿತು ಖಚಿತಪಡಿಸಿಕೊಳ್ಳಬೇಕು. ನ್ಯುಮೋನಿಯಾ ಸೋಂಕಿನಿಂದ ಉದ್ಭವಿಸಬಹುದಾದ ಪರಿಸ್ಥಿತಿ ಎದುರಿಸಲು ಆಸ್ಪತ್ರೆಗಳನ್ನು ಸಜ್ಜುಗೊಳಿಸಬೇಕು ಎಂದು ಆಯುಕ್ತರು ಸೂಚಿಸಿದ್ದಾರೆ

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments