#Exclusive NewsHealthTop Newsರಾಜಕೀಯಸುದ್ದಿ

ಜೈಲಿನಲ್ಲಿ ಇನ್ಸುಲಿನ್ ಕೊಡದಿದ್ದರೆ ನಾನು ಸಾಯುತ್ತಿದ್ದೆ:ಅರವಿಂದ್ ಕೇಜ್ರಿವಾಲ್

ಜೈಲಿನಲ್ಲಿ ಇನ್ಸುಲಿನ್ ಕೊಡದಿದ್ದರೆ ನಾನು ಸಾಯುತ್ತಿದ್ದೆ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಮದ್ಯನೀತಿ ಹಗರಣದಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಅವರು, ಜೈಲಿನಲ್ಲಿ ತಮಗಾದ ಕಹಿ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಜೈಲಿನಲ್ಲಿ ಇನ್ಸುಲಿನ್ ನಿರಾಕರಿಸುವ ಮೂಲಕ ನನ್ನ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದಿದ್ದಾರೆ.

ಕಳೆದ 10 ವರ್ಷಗಳಿಂದ ನಮ್ಮ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಬಿಜೆಪಿ ನಮ್ಮನ್ನು ಜೈಲಿಗೆ ಕಳುಹಿಸಿದೆ. ಅಷ್ಟೇ ಅಲ್ಲದೆ ಲೆಫ್ಟಿನೆಂಟ್ ಗವರ್ನರ್ ಮೂಲಕ ಹಲವು ಯೋಜನೆಗಳನ್ನು ನಿಲ್ಲಿಸುವ ಪ್ರಯತ್ನವನ್ನೂ ಮಾಡಲಾಗಿದೆ.

ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ ಮತ್ತು ದೆಹಲಿಯಲ್ಲಿ ಜನರಿಗಾಗಿ ಕೆಲಸ ಮಾಡುತ್ತಿರುವುದರಿಂದ ನನ್ನನ್ನು ಜೈಲಿಗೆ ಕಳುಹಿಸಲಾಗಿದೆ ಎಂದು ಪ್ರತಿಪಾದಿಸಿದರು.

ಜೈಲಿನಲ್ಲಿದ್ದಾಗ ಬಿಜೆಪಿ ಅಭಿವೃದ್ಧಿ ಕಾರ್ಯಗಳನ್ನು ನಿಲ್ಲಿಸಿದೆ ಎಂದು ಆರೋಪಿಸಿದ ಕೇಜ್ರಿವಾಲ್, ಜಾಮೀನಿನ ಮೇಲೆ ಹೊರಬಂದ ನಂತರ ಎಎಪಿ ಸರ್ಕಾರವು ಗುಂಡಿಬಿದ್ದಿರುವ ರಸ್ತೆಗಳ ದುರಸ್ತಿ, ಚರಂಡಿಗಳನ್ನು ಸ್ವಚ್ಛಗೊಳಿಸುವುದು ಮತ್ತು ನೀರು ಸರಬರಾಜು ಮಾಡುವ ಕೆಲಸವನ್ನು ಪುನರಾರಂಭಿಸಿದೆ ಎಂದು ಹೇಳಿದರು.

2015 ರಿಂದ ಎಎಪಿ ಆಳ್ವಿಕೆ ನಡೆಸುತ್ತಿರುವ ದೆಹಲಿಯಲ್ಲಿ ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆಯಿದೆ.

Comments (0)

Your email address will not be published. Required fields are marked *

Back to top button