ಜಿಲ್ಲೆಮನರಂಜನೆ

ಟಿಪ್ಪು ಅಂದ್ರೆ ಸಿದ್ದರಾಮಯ್ಯನವರಿಗೆ ಬಹಳ ಪ್ರೀತಿ : ಆರ್​. ಅಶೋಕ್

ಬೆಳಗಾವಿ :  ಮುಸ್ಲಿಮರಿಗೆ ದೇಶದ ಸಂಪತ್ತು ಹಂಚುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ. ಟಿಪ್ಪು ಅಂದ್ರೆ ಸಿದ್ದರಾಮಯ್ಯನವರಿಗೆ ಬಹಳ ಪ್ರೀತಿ, ನಿನ್ನೆಯ ಅವರ ಮಾತು ದೇಶ ಮತ್ತು ರಾಜ್ಯದ ದೃಷ್ಟಿಯಿಂದ ಒಳ್ಳೆಯ ಹೇಳಿಕೆ ಅಲ್ಲ ಎಂದು ಸಿದ್ದು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಹುಬ್ಬಳ್ಳಿಯ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮುಸ್ಲಿಂರಿಗೆ ಅನ್ಯಾಯವಾಗಲು ನಾನು ಬಿಡಲ್ಲ. ಅವರನ್ನು ರಕ್ಷಣೆ ಮಾಡುತ್ತೇನೆ  ಎಂದು ಮುಸ್ಲಿಂರ ಪರವಾಗಿ ಮಾತನಾಡಿದ್ರು,  ಜಾತಿ ಧರ್ಮಕ್ಕೆ ಜೋತು ಬಿಳಬಾರದು ಎಂಬ ಹೇಳಿಕೆಯನ್ನು ನೀಡಿದ್ದರು.  ಟಿಪ್ಪು ಮೇಲೆ ಅತಿಯಾದ ಪ್ರೀತಿ ತೋರಿಸಿ ಹಿಂದೆ ಏನಾಯ್ತು?. ಹಿಂದುಗಳನ್ನ ಎರಡನೇ ದರ್ಜೆ ರೀತಿ ನೋಡ್ತಿದ್ದಾರೆ. ಎಲ್ಲರಿಗೂ ಸಮಾನತೆ ಇರಬೇಕು. ಟಿಪ್ಪು ಜಯಂತಿ, ಶಾದಿ ಭಾಗ್ಯ, ಮುಸ್ಲಿಂ ವಿವಾಹಕ್ಕೆ ಧನ ಸಹಾಯ ಈ ರೀತಿ ಕಾರ್ಯಕ್ರಮಗಳನ್ನ ತಂದ್ರು. ಮುಸ್ಲಿಂಮರನ್ನ ವೋಟಿನ ಗಾಳವಾಗಿ ಕಾಂಗ್ರೆಸ್ ಬಳಕೆ ಮಾಡಿಕೊಳ್ತಿದೆ ಎಂದು  ಸಿದ್ದು ವಿರುದ್ಧ ಹರಿಹಾಯ್ದಿದ್ದಾರೆ.

ಸುವರ್ಣಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಸಮಾನತೆ ಇರಬೇಕು. ಟಿಪ್ಪು ಜಯಂತಿ, ಶಾಯಿ ಭಾಗ್ಯ, ಮುಸ್ಲಿಂ ವಿವಾಹಕ್ಕೆ ಧನ ಸಹಾಯ ಈ ರೀತಿ ಕಾರ್ಯಕ್ರಮಗಳನ್ನ ತಂದರು. ಮುಸ್ಲಿಮರನ್ನು ವೋಟ್​ ಗಾಳವಾಗಿ ಕಾಂಗ್ರೆಸ್ ಬಳಕೆ ಮಾಡಿಕೊಳ್ಳುತ್ತಿದೆ ಎಂದರು.

ಅಲ್ಪಸಂಖ್ಯಾತರು, ಬಹುಸಂಖ್ಯಾತರು ಅನ್ನೋದನ್ನು ಬಿಡಬೇಕು

ದೊಡ್ಡ ಕೋಮುವಾದಿ ಅಂದರೇ ಕಾಂಗ್ರೆಸ್​ನವರು. ಸಿದ್ದರಾಮಯ್ಯ ದೊಡ್ಡ ಕೋಮುವಾದಿ. ಸುಖದಲ್ಲಿ ತೇಲುತ್ತಿರುವ ವ್ಯಕ್ತಿ ಅಂದರೆ ಅದು ಸಿದ್ದರಾಮಯ್ಯ. ಮುಖ್ಯಮಂತ್ರಿಗಳು ಅಲ್ಪಸಂಖ್ಯಾತರು, ಬಹುಸಂಖ್ಯಾತರು ಅನ್ನೋದನ್ನು ಬಿಡಬೇಕು. ರಾಜಕೀಯ ಸಲುವಾಗಿ ಬರಿ ಮತಕ್ಕಾಗಿ ಪುಷ್ಠೀಕರಣ ನೀಡುತ್ತಿದ್ದಾರೆ. ಈ ರೀತಿಯ ವಿಶೇಷ ಹೇಳಿಕೆ ಅಷ್ಟು ಸೂಕ್ತವಲ್ಲ. ನಮ್ಮ ಸಮಾಜದಲ್ಲಿ ಸಮಸ್ಯೆಯಿಂದ ಕಾಡುತ್ತಿದ್ದರೆ ಅದು ಕಾಂಗ್ರೆಸ್ ಎಂದು ಎಂದು ಬಿಜೆಪಿ ಶಾಸಕ ಡಾ.ಅಶ್ವತ್ಥ್ ನಾರಾಯಣ ಎಂದು ಕಿಡಿಕಾರಿದರು.

Comments (0)

Your email address will not be published. Required fields are marked *

Back to top button