ಚಿಕ್ಕಬಳ್ಳಾಪುರ : ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಬಾಲರಾಮನ ಪ್ರತಿಷ್ಠಾಪನೆ ಪ್ರಯುಕ್ತ, ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಗೌರಿಬಿದನೂರು ಹಾಗೂ ದೇವನಹಳ್ಳಿ ವಿಧಾನಸಭಾ ಕ್ಷೇತ್ರಗಳಲ್ಲಿ ಡಾ.ಕೆ.ಸುಧಾಕರ್ ಫೌಂಡೇಶನ್ ವತಿಯಿಂದ ವಿಶೇಷ ಪೂಜೆ ಹಾಗೂ ಪ್ರಸಾದ ವಿನಿಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಪ್ರತಿ ಗ್ರಾಮ ಪಂಚಾಯತಿಯಲ್ಲಿ ಒಂದು ಪ್ರಮುಖ ದೇವಸ್ಥಾನದಲ್ಲಿ ಜನವರಿ 22ರಂದು ಡಾ.ಕೆ.ಸುಧಾಕರ್ ಫೌಂಡೇಶನ್ ವತಿಯಿಂದ ವಿಶೇಷ ಪೂಜೆ ಹಾಗೂ ಪ್ರಸಾದ ವಿನಿಯೋಗ ಕಾರ್ಯಕ್ರಮ ನಡೆಯಲಿದೆ. ಸ್ಥಳೀಯ ಮುಖಂಡರು, ಗ್ರಾಮಸ್ಥರು ಸೇರಿದಂತೆ ಎಲ್ಲಾ ರಾಮಭಕ್ತರು ಪಾಲ್ಗೊಂಡು ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಸಂಭ್ರಮವನ್ನು ಆಚರಿಸಲಿದ್ದಾರೆ.
ಈ ಕುರಿತು ಮಾತನಾಡಿದ ಮಾಜಿ ಸಚಿವ ಡಾ.ಕೆ.ಸುಧಾಕರ್, ಅಯೋಧ್ಯೆಯಲ್ಲಿ ಐನೂರು ವರ್ಷಗಳ ಕನಸು ನನಸಾಗಿದ್ದು, ಮಾನ್ಯ ಪ್ರಧಾನಿ ನರೇಂದ್ರ ಮೋದಿ ಪ್ರಾಣ ಪ್ರತಿಷ್ಠಾಪನೆಯಲ್ಲಿ ಭಾಗವಹಿಸಿ ಇತಿಹಾಸ ಬರೆಯಲಿದ್ದಾರೆ. ಈ ಮೂಲಕ ಕೋಟ್ಯಂತರ ರಾಮಭಕ್ತರು ಹಾಗೂ ಕರಸೇವಕರ ಹೋರಾಟ, ತ್ಯಾಗ, ಬಲಿದಾನ ಹಾಗೂ ಶ್ರಮಕ್ಕೆ ಸಾರ್ಥಕತೆ ದೊರೆಯಲಿದೆ. ಈ ಶುಭ ಗಳಿಗೆಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಭಕ್ತಿ ಭಾವದೊಂದಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.


