ಬೆಂಗಳೂರು :- ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಿಬಿಐ ತನಿಖೆ ವಾಪಾಸ್ ಪಡೆದುಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಆದ್ರೆ, ಇತ್ತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರದ ನಡೆಯನ್ನು ಪ್ರಶ್ನಿಸಿ ಹೈಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

ವಿಚಾರಣೆಗೆ ಬಾಕಿ ಇರುವಾಗ ಮೇಲ್ಮನವಿಯಲ್ಲೇ ಮಧ್ಯಂತರ ಅರ್ಜಿ ಸಲ್ಲಿಕೆ ಮಾಡಿದ್ದು, ಹೈಕೋರ್ಟ್ ವಿಚಾರಣೆಯನ್ನು ನಿಷ್ಪಲಗೊಳಿಸಲು ಯತ್ನಿಸಲಾಗುತ್ತಿದೆ. ಸಿಬಿಐ ತನಿಖೆಯು ಮುಕ್ತಾಯದ ಹಂತದಲ್ಲಿದೆ. ಸರ್ಕಾರದ ಕ್ರಮ ಬಹಿರಂಗವಾಗಿದ್ದು, ಸಿಬಿಐ ತನಿಖೆಯನ್ನು ಮೊಟಕುಗೊಳಿಸುವ ಉದ್ದೇಶ ಹೊಂದಿದೆ. ಈ ಮೂಲಕ ನ್ಯಾಯಾಂಗದ ಕಾರ್ಯ ನಿರ್ವಹಣೆಯಲ್ಲಿ ಹಸ್ತಕ್ಷೇಪ ನಡೆಯುತ್ತಿದೆ. ಹೀಗಾಗಿ ಸರ್ಕಾರದ ಕ್ರಮಕ್ಕೆ ಸೀಮಿತವಾಗಿ ತಮ್ಮ ವಾದ ಅಲಿಸಲು ಯತ್ನಾಳ್ ಮನವಿ ಮಾಡಿದ್ದಾರೆ.