Friday, September 12, 2025
23 C
Bengaluru
Google search engine
LIVE
ಮನೆ#Exclusive Newsಡಿ ಗ್ಯಾಂಗ್'​ನಿಂದ‌ ಹತ್ಯೆಗೀಡಾದ ಮೃತ ರೇಣುಕಾಸ್ವಾಮಿಗೆ ಗಂಡು ಮಗು ಜನನ

ಡಿ ಗ್ಯಾಂಗ್’​ನಿಂದ‌ ಹತ್ಯೆಗೀಡಾದ ಮೃತ ರೇಣುಕಾಸ್ವಾಮಿಗೆ ಗಂಡು ಮಗು ಜನನ

ಚಿತ್ರದುರ್ಗ: ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಕೊಲೆಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಪತ್ನಿ ಸಹನಾ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಇಂದು ಬೆಳಗಿನ ಜಾವ 7ಗಂಟೆ 1 ನಿಮಿಷದಲ್ಲಿ ನಗರದ ಜೆಸಿಆರ್ ಬಡಾವಣೆಯಲ್ಲಿರುವ ಕೀರ್ತಿ ಆಸ್ಪತ್ರೆಯಲ್ಲಿ ಸಹನಾ ಮಗುವಿಗೆ ನನ್ಮ ನೀಡಿದರು.

ನಿಗದಿತ ದಿನಾಂಕಕ್ಕಿಂತ ಒಂದು ವಾರ ಮೊದಲೇ ಮಗು ಜನನ ಹಿನ್ನೆಲೆ , ವೈದ್ಯಾಧಿಕಾರಿಗಳು ಮಗುವನ್ನು ಅಬ್ಜರ್ವೇಶನ್ ನಲ್ಲಿ ಇಟ್ಟಿದ್ದಾರೆ. ಮೃತ ರೇಣುಕಾ ಸ್ವಾಮಿ ಮನೆಯಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಯಾಗಿದೆ.

ಮಗನೇ ಹುಟ್ಟಿ ಬಂದಷ್ಟು ಸಂತೋಷ : ಮೊಮ್ಮಗ ಕಂಡು ನಗೆ ಬೀರಿದ ಶಿವನಗೌಡರು.

ಮೃತ ರೇಣುಕಾಸ್ವಾಮಿ ಮನೆಗೆ ಮೊಮ್ಮಗನ ಆಗಮನ ಹಿನ್ನೆಲೆಯಲ್ಲಿ ಕುಟುಂಬಸ್ಥರಲ್ಲಿ ಸಂಭ್ರಮ, ಸಂತಸ ಮನೆ ಮಾಡಿದೆ. ಮೊಮ್ಮಗ ಜನ್ಮ ಸಂಭ್ರಮದ ವೇಳೆ ಮಾಧ್ಯಮಗಳ ಮುಂದೆ ಮೊದಲ ಬಾರಿಗೆ ಕಾಶೀನಾಥ ಶಿವನಗೌಡ್ರ ನಗೆ ಬೀರಿದ್ದಾರೆ.
ಮೊಮ್ಮಗ ಜನನವಾದ ಬಳಿಕ ತಾತ ಕಾಶೀನಾಥ ಶಿವನಗೌಡ್ರ ಮಾತನಾಡಿ ನಮ್ಮ ಮಗನೇ ಹುಟ್ಟಿ ಬಂದಷ್ಟು ಸಂತೋಷವಾಗಿದೆ ಎಂದು, ಮಗನನ್ನು ನೆನೆದ ಕಾಶೀನಾಥ ಶಿವನಗೌಡ್ರ ಮಗನನ್ನು ನೆನೆದು ಕಣ್ಣೀರಿಟ್ಟರು.

ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ತುಂಬಾ ಕಾಳಜಿ ವಹಿಸಿದ್ದಾರೆ. ನಾನು ವೈದ್ಯರು ಹಾಗೂ ಸಿಬ್ಬಂದಿಗೆ ಚಿರರುಣಿ ಎಂದು ಚಿತ್ರದುರ್ಗದಲ್ಲಿ ಮೃತ ರೇಣುಕಾಸ್ವಾಮಿ ತಂದೆ ಕಾಶೀನಾಥ ಶಿವನಗೌಡ್ರ ಹೇಳಿದರು.

ನಟಿ ಪವಿತ್ರಾ ಗೌಡಗೆ ಮೃತ ರೇಣುಕಾ ಸ್ವಾಮಿ ಅಶ್ಲೀಲ ಮೆಸೇಜ್ ಮಾಡಿದ ಆರೋಪದಲ್ಲಿ ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನು ಕರೆದೊಯ್ದು ಕೊಲೆ ಮಾಡಲಾಗಿತ್ತು. ಈ ಸಂಬಂಧ ನಟ ದರ್ಶನ್ ಮತ್ತು ಗ್ಯಾಂಗ್ ಜೈಲು ಸೇರಿದ್ದಾರೆ. ಅಲ್ಲದೆ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ರದ್ದು ಮಾಡಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments