#Exclusive NewsTop Newsಫ್ರೀಡಂ ಟಿವಿ ವಿಶೇಷರಾಜಕೀಯವಿಶೇಷಸುದ್ದಿ

ತಿರುಪತಿ ಲಡ್ಡು ವಿವಾದ: ಆಂಧ್ರ ಡಿಸಿಎಂ ಪವನ್ ಕಲ್ಯಾಣ್ 11 ದಿನಗಳ ಪ್ರಾಯಶ್ಚಿತ್ತ ದೀಕ್ಷೆ

ಗೂಂಟುರು:ಟಿಟಿಡಿ  ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದಕ್ಕೆ ತಿಮ್ಮಪ್ಪನಿಗೆ   ಪ್ರಾಯಶ್ಚಿತ್ತ ಮಾಡಿಕೊಳ್ಳಲು 11 ದಿನಗಳ ಪ್ರಾಯಶ್ಚಿತ್ತ ದೀಕ್ಷೆ ಕೈಗೊಳ್ಳುವುದಾಗಿ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ನಟ ಪವನ್ ಕಲ್ಯಾಣ್ ಶನಿವಾರ ಹೇಳಿದ್ದಾರೆ.ಗುಂಟೂರು ಜಿಲ್ಲೆಯ ನಮ್ಮೂರಿನ ಶ್ರೀ ದಶಾವತಾರ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರದಿಂದ ಶಾಸ್ತ್ರೋಕ್ತವಾಗಿ ಪ್ರಾಯಶ್ಚಿತ್ತ ದೀಕ್ಷೆ ಆರಂಭಿಸುವುದಾಗಿ ನಟ-ರಾಜಕಾರಣಿ ತಿಳಿಸಿದ್ದಾರೆ.

“11 ದಿನಗಳ ಪ್ರಾಯಶ್ಚಿತ್ತ ದೀಕ್ಷೆ ಕೈಗೊಂಡ ನಂತರ, ನಾನು ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳುತ್ತೇನೆ” ಎಂದು ಪವನ್ ಕಲ್ಯಾಣ್ ಅವರು ‘X’ ಪೋಸ್ಟ್‌ ಮಾಡಿದ್ದಾರೆ. ಅಲ್ಲದೆ ಧಾರ್ಮಿಕ ಶುದ್ಧೀಕರಣ ಮಾಡುವ ಶಕ್ತಿಯನ್ನು ತನಗೆ ನೀಡುವಂತೆ ದೇವರಿಗೆ ಕೇಳಿಕೊಂಡಿದ್ದಾರೆ.ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು. ಅಲ್ಲದೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

 

Comments (0)

Your email address will not be published. Required fields are marked *

Back to top button