Freedom TV

ತೆಲಂಗಾಣ ಚುನಾವಣೆ 2023: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ಮೋದಿ ಕರೆ

ದೆಹಲಿ : ತೆಲಂಗಾಣ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಗೆ ಗುರುವಾರ ಕರೆ ನೀಡಿದ್ದಾರೆ.


ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಪ್ರಜಾಪ್ರಭುತ್ವವನ್ನು ಬಲಪಡಿಸಲು ಹಾಗೂ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾನು ತೆಲಂಗಾಣದ ನನ್ನ ಸಹೋದರ, ಸಹೋದರಿಯರಿಗೆ ಮನವಿ ಮಾಡುತ್ತೇನೆ. ವಿಶೇಷವಾಗಿ ಯುವ ಮತ್ತು ಮೊದಲ ಬಾರಿಗೆ ಮತ ಚಲಾಯಿಸುವವರಿಗೆ ಶುಭಾಶಯಗಳು’ ಎಂದು ಹೇಳಿದ್ದಾರೆ.

ಮೆಗಾಸ್ಟಾರ್ ಚಿರಂಜೀವಿ, ಪತ್ನಿ ಸುರೇಖಾ ಹಾಗೂ ಮಗಳು ಶ್ರೀಜಾ ಅವರೊಂದಿಗೆ ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ಮತಗಟ್ಟೆಗೆ ಮತ ಚಲಾಯಿಸಲು ಆಗಮಿಸಿದರು. ಸರತಿ ಸಾಲಿನಲ್ಲಿ ನಿಂತು ಅವರು ಮತ ಚಲಾಯಿಸಿದ್ದಾರೆ.

Comments (0)

Your email address will not be published. Required fields are marked *

Back to top button