#Exclusive NewsTop Newsದೇಶ/ವಿದೇಶಸುದ್ದಿ

ದೆಹಲಿ ಚಲೋ: ಶಂಭು ಗಡಿಭಾಗದಿಂದ ರಾಷ್ಟ್ರ ರಾಜಧಾನಿಗೆ ರೈತರ ಪ್ರತಿಭಟನಾ ಮೆರವಣಿಗೆ

ನವದೆಹಲಿ: ಕನಿಷ್ಠ ಬೆಂಬಲ ಬೆಲೆಗೆ (MSP) ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸರ್ಕಾರದ ಗಮನ ಸೆಳೆಯಲು 101 ಮಂದಿ ರೈತರ ಗುಂಪು ಇಂದು ಪಂಜಾಬ್​ನ ಶಂಭು ಗಡಿ ಭಾಗದಿಂದ ರಾಷ್ಟ್ರ ರಾಜಧಾನಿ ನವದೆಹಲಿಗೆ ಪಾದಯಾತ್ರೆಯನ್ನು ಪುನರಾರಂಭಿಸಿದೆ. ಪಂಜಾಬ್‌ನ ಶಂಭು ಗಡಿಯಲ್ಲಿ ಪೊಲೀಸರು ಮತ್ತು ಅರೆಸೇನಾಪಡೆಯನ್ನು ಭಾರೀ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ.

ರೈತ ಸಂಘಗಳಾದ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನೀಡಿದ ದೆಹಲಿ ಚಲೋ ಕರೆಯ ಭಾಗವಾಗಿ, 101 ರೈತರು ಪಂಜಾಬ್​ನ ಶಂಭು ಗಡಿಯಲ್ಲಿರುವ ತಮ್ಮ ಪ್ರತಿಭಟನಾ ಸ್ಥಳದಿಂದ ದೆಹಲಿಯತ್ತ ಮೆರವಣಿಗೆಯನ್ನು ಪುನರಾರಂಭಿಸಿದ್ದಾರೆ.

ಇನ್ನು, ಪಂಜಾಬ್-ಹರಿಯಾಣ ಗಡಿಯಲ್ಲಿ ಭದ್ರತಾ ಸಿಬ್ಬಂದಿ ಹಾರಿಸಿದ ಅಶ್ರುವಾಯು ಶೆಲ್‌ಗಳಿಂದ ಕೆಲ ಪ್ರತಿಭಟನಾನಿರತ ರೈತರು ಗಾಯಗೊಂಡಿದ್ದರು. ಇದರಿಂದಾಗಿ ಪ್ರತಿಭಟನಾನಿರತ ರೈತರು ಶುಕ್ರವಾರ ತಮ್ಮ ದೆಹಲಿ ಚಲೋ ಮೆರವಣಿಗೆಯನ್ನು ದಿನದ ಮಟ್ಟಿಗೆ ಸ್ಥಗಿತಗೊಳಿಸಿದ್ದರು. ಕನಿಷ್ಠ ಬೆಂಬಲ ಬೆಲೆಗೆ ಕಾನೂನಾತ್ಮಕ ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನಾನಿರತ ರೈತರು ಒತ್ತಾಯಿಸಿದ್ದಾರೆ. ಮಾತುಕತೆ ಮೂಲಕ ತಮ್ಮ ಸಮಸ್ಯೆಗಳನ್ನು ಬಗೆಹರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಪ್ರತಿಭಟನಾನಿರತ ರೈತರು ಒತ್ತಡ ಹೇರುತ್ತಿದ್ದಾರೆ.

Comments (0)

Your email address will not be published. Required fields are marked *

Back to top button