Tuesday, June 24, 2025
26.6 C
Bengaluru
Google search engine
LIVE
ಮನೆ#Exclusive Newsದೆಹಲಿ ಶಾಸಕಾಂಗ ಪಕ್ಷದ ನಾಯಕರಾಗಿ ಅತಿಶಿ ಅವರ ಹೆಸರು ಮುಂಚುಣಿ!

ದೆಹಲಿ ಶಾಸಕಾಂಗ ಪಕ್ಷದ ನಾಯಕರಾಗಿ ಅತಿಶಿ ಅವರ ಹೆಸರು ಮುಂಚುಣಿ!

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಅವರ ಹೆಸರು ಮುಂಚುಣಿಯಲ್ಲಿ ಕೇಳಿ ಬರುತ್ತೀದೆ. ಎಎಪಿ ಪಕ್ಷದ ಶಾಸಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಂಬಂಧ ಪಕ್ಷದಿಂದ ಅಧಿಕೃತ ಘೋಷಣೆ ಇನ್ನೂ ಹೊರಬರಬೇಕಾಗಿದೆ.ಇಂದು ನಡೆದ ಎಎಪಿ ಶಾಸಕರ ಸಭೆಯಲ್ಲಿ ಪಕ್ಷದ ನಾಯಕ ದಿಲೀಪ್ ಪಾಂಡೆ, ನೂತನ ಮುಖ್ಯಮಂತ್ರಿಯನ್ನು ಕೇಜ್ರಿವಾಲ್ ನಿರ್ಧರಿಸುವಂತೆ ಪ್ರಸ್ತಾಪಿಸಿದರು. ಆಗ ಎಎಪಿ ರಾಷ್ಟ್ರೀಯ ಸಂಚಾಲಕರು ಅತಿಶಿ ಅವರ ಹೆಸರನ್ನು ಪ್ರಸ್ತಾಪಿಸಿದಾಗ, ಎಲ್ಲಾ ಎಎಪಿ ಶಾಸಕರು ಎದ್ದುನಿಂತು ಅದನ್ನು ಸರ್ವಾನುಮತದಿಂದ ಒಪ್ಪಿಕೊಂಡಿದ್ದಾರೆ.ಎಂಎಸ್ ಅತಿಶಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.ಅತಿಶಿ ಪ್ರಸ್ತುತ ದೆಹಲಿ ಸರ್ಕಾರದಲ್ಲಿ ಶಿಕ್ಷಣ ಮತ್ತು ಲೋಕೋಪಯೋಗಿ ಇಲಾಖೆಯಂತಹ ಪ್ರಮುಖ ಖಾತೆಗಳನ್ನು ನಿರ್ವಹಿಸುತ್ತಿದ್ದಾರೆ. ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿ ಮತ್ತು ರೋಡ್ಸ್ ವಿದ್ವಾಂಸರಾಗಿದ್ದಾರೆ.ಕಲ್ಕಾಜಿಯ ಶಾಸಕರಾಗಿದ್ದ 43 ವರ್ಷದ ಅತಿಶಿ, ದೆಹಲಿಯ ಈಗ ರದ್ದುಗೊಂಡಿರುವ ಅಬಕಾರಿ ನೀತಿ ಪ್ರಕರಣದಲ್ಲಿ ಭ್ರಷ್ಟಾಚಾರ ಆರೋಪದಲ್ಲಿ ಸಿಸೋಡಿಯಾ ಅವರನ್ನು ಬಂಧಿಸಿದ ನಂತರ ಸಚಿವರಾಗಿದ್ದರು.ಕೇಜ್ರಿವಾಲ್ ಮತ್ತು ಸಿಸೋಡಿಯಾ ಜೈಲಿನಲ್ಲಿದ್ದಾಗ ಅತಿಶಿ ಪಕ್ಷದ ಕಾರ್ಯಕ್ರಮಗಳು ಮತ್ತು ಮಾಧ್ಯಮ ಸಂವಾದದಲ್ಲಿ ಪಕ್ಷದ ನಿಲುವನ್ನು ಸ್ಪಷ್ಪಡಿಸುವ ಮೂಲಕ ಬಿಜೆಪಿ ಹಾಗೂ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.

 

ಬಿಜೆಪಿ ಸೇರುವಂತೆ ಆಪ್ತರ ಮೂಲಕ ಆಹ್ವಾನ: ದೆಹಲಿ ಸಚಿವೆ ಅತಿಶಿಗೆ ಚುನಾವಣಾ ಆಯೋಗ ನೋಟಿಸ್

 

 

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments