ದ್ವಿತೀಯ ಪಿಯುಸಿಯ ಪ್ರಾಯೋಗಿಕ ಪರೀಕ್ಷೆಗಳಿಗೆ ಪ್ರಸಕ್ತ ಸಾಲಿನಿಂದ ವಿದ್ಯಾರ್ಥಿಗಳು ಬೇರೆ ಕಾಲೇಜುಗಳಿಗೆ ತೆರಳಬೇಕೆಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿರುವುದನ್ನು ತಡೆ ಹಿಡಿದಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸೂಚನೆ ಮೇರೆಗೆ ಮಂಡಳಿ ಹೊರಡಿಸಿದ್ದ ಸುತ್ತೋಲೆಯನ್ನು ತಡೆ ಹಿಡಿದಿದೆ. ಹಿಂದೆ ಇದ್ದ ವ್ಯವಸ್ಥೆಯೇ ಮುಂದುವರಿಯಲಿದೆ. ವಿದ್ಯಾರ್ಥಿಗಳು ತಮ್ಮ ಕಾಲೇಜಿನಲ್ಲಿ ಪ್ರಯೋಗಾಲಯಗಳಿದ್ದರೆ ಅಲ್ಲೇ ಪರೀಕ್ಷೆಯಲ್ಲಿ ಭಾಗಿಯಾಗಬಹುದಾಗಿದೆ. ಇಲ್ಲದಿದ್ದಲ್ಲಿ ಸಮೀಪದ ಕಾಲೇಜಿಗೆ ತೆರಳ ಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.