Freedom TV

ನಾನೇನೂ ತಪ್ಪು ಮಾಡಿಲ್ಲ, ಪಕ್ಷದ ಕೆಲಸ ಮಾಡಿದ್ದೇನೆ: ಡಿ.ಕೆ ಶಿವಕುಮಾರ್​

ಬೆಂಗಳೂರು : ನನ್ನ ವಿರುದ್ಧ ಸಿಬಿಐ ತನಿಖೆ ರದ್ದುಪಡಿಸಿದ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಹೈಕೋರ್ಟ್​ಗೆ ಧನ್ಯವಾದಗಳೂ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​​ ಬುಧವಾರ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ಪೋಸ್ಟ್​​ ಮಾಡಿರುವ ಡಿ.ಕೆ ಶಿವಕುಮಾರ್​​, ನಾನೇನೂ ತಪ್ಪು ಮಾಡಿಲ್ಲ, ಪಕ್ಷದ ಕೆಲಸ ಮಾಡಿದ್ದೇನೆ ಅಷ್ಟೇ. ಅದೇ ಕಾರಣಕ್ಕೆ ನನಗೆ ತೊಂದರೆ ನೀಡಿದ್ದಾರೆ. ಅದರ ಪರಿಣಾಮ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದ್ದಾರೆ.

ಈ ಸಮಯದಲ್ಲಿ ಯಾರು ಏನು ಮಾತನಾಡಿದ್ದಾರೆ ಎಂಬುದನ್ನು ಗಮನಿಸಿದ್ದೇನೆ, ಎಲ್ಲರಿಗೂ ಒಳ್ಳೆಯದಾಗಲಿ ಕಷ್ಟಕಾಲದಲ್ಲಿ ನನ್ನ ಜೊತೆ ನಿಂತ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದು ಡಿಸಿಎಂ ಡಿ.ಕೆ ಶಿವಕುಮಾರ್​ ತಿಳಿಸಿದ್ದಾರೆ.

Comments (0)

Your email address will not be published. Required fields are marked *

Back to top button