Tuesday, April 29, 2025
29.1 C
Bengaluru
LIVE
ಮನೆ#Exclusive Newsನೀರು ನುಗ್ಗಿದ ಮನೆ ಮಾಲೀಕರಿಗೆ ₹10,000 : ಡಿಸಿಎಂ ಡಿ.ಕೆ.ಶಿವಕುಮಾರ್​

ನೀರು ನುಗ್ಗಿದ ಮನೆ ಮಾಲೀಕರಿಗೆ ₹10,000 : ಡಿಸಿಎಂ ಡಿ.ಕೆ.ಶಿವಕುಮಾರ್​

ಬೆಂಗಳೂರು:ಮಳೆ ನೀರು ಮನೆಗೆ ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ 10 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ರಾಜಕಾಲುವೆ ಒತ್ತುವರಿಯನ್ನು ನಿರ್ದಾಕ್ಷಿಣ್ಯ ತೆರವುಗೊಳಿಸುವಂತೆ ನಿರ್ದೇಶಿಸಿದ್ದಾರೆ. ಬುಧವಾರ ಪ್ರವಾಹದಿಂದ ಹಾನಿಗೀಡಾದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿ ನಡೆಸಿದ ಅವರು, ವಸತಿ ಇಲ್ಲದವರಿಗೆ ವಾಸಿಸಲು ತಾತ್ಕಾಲಿಕ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ. ‘ಯಲಹಂಕದ ಕೇಂದ್ರಿಯ ವಿಹಾರ ಅಪಾರ್ಟ್‌ ಮೆಂಟ್, ಬ್ಯಾಟರಾಯನಪುರದ ಮರಿಯಣ್ಣ ಪಾಳ್ಯ, ಕೆ.ಆ‌ರ್.ಪುರದ ಶ್ರೀ ಸಾಯಿ ಲೇಔಟ್ ಗೆ ಭೇಟಿ ನೀಡಿ ಪರಿಹಾರ ಕಾರ್ಯ ವೀಕ್ಷಿಸಿ, ಅಪಾರ್ಟ್‌ ಮೆಂಟ್ ನಿವಾಸಿಗಳ ಸಂಘದ ಪದಾಧಿ ಕಾರಿಗಳೊಂದಿಗೆ ಚರ್ಚಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕಾಲುವೆ ಸ್ವಚ್ಛತೆ ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡರು ಕೆಲಸ ಮಾಡುತ್ತಿದ್ದಾರೆ. ಎನ್‌ಡಿಆರ್‌ಎಫ್ ನಿಧಿ ಸೇರಿ ವಿವಿಧ ಯೋಜ ನೆಗಳ ಅಡಿ ಕೆರೆಗಳ ಸ್ವಚ್ಚತೆ, ಹೂಳು ತೆಗೆಯುವ ಕೆಲಸ ಮಾಡ ಲಾಗುವುದು. ಶೀಘ್ರದಲ್ಲೇ ಕೆರೆ ನಿರ್ವಹಣಾ ಸಮಿತಿಯ ಸಭೆ ಕರೆಯಲಾಗುವುದು ಎಂದು ಹೇಳಿದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments