Freedom TV

ನೂತನ ಶಾಸಕರಿಗಿಲ್ಲ ನಿಗಮ ಮಂಡಳಿ ಪಟ್ಟ ; ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಕಾಂಗ್ರೆಸ್​​ ಪಕ್ಷ ಅಧಿಕಾರಕ್ಕೆ ಬಂದು ಆರೇಳು ತಿಂಗಳು ಕಳೆದ್ರೂ ನಿಗಮ ಮಂಡಳಿಗೆ ಆಯ್ಕೆ ಆಗಿರಲಿಲ್ಲ. ನಿಗಮ ಮಂಡಳಿ ಹುದ್ದೆ ಮೇಲೆ ಹಲವು ಶಾಸಕರ ಕಣ್ಣಿಟ್ಟಿದ್ದರು. ಈದೀಗ ಹೈಕಮಾಂಡ್ ಅಳೆದು ತೂಗಿ ಪಂಚರಾಜ್ಯಗಳ ಚುನಾವಣೆ ಬಳಿಕ ನಿಗಮ ಮಂಡಳಿ ಆಯ್ಕೆ ಬಹುತೇಕ ಫೈನಲ್ ಮಾಡಿಕೊಂಡಿದೆ.

ನಿಗಮ ಮಂಡಳಿ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್ ಮೊದಲ ಪಟ್ಟಿಯಲ್ಲಿ ಮೊದಲ ಬಾರಿಗೆ ಶಾಸಕರಾದವರಿಗೆ ಅವಕಾಶ ನೀಡಿಲ್ಲ. ಮುಂದಿನ ಪಟ್ಟಿಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ನೀಡಲು ತೀರ್ಮಾನವಾಗಿದೆ. ನಿಗಮ ಮಂಡಳಿ ನೇಮಕಾತಿ, ಕಾರ್ಯಕರ್ತರಿಗೂ ಅವಕಾಶ ಸಂಬಂಧ ನಾನು ಸಿಎಂ ಸಿದ್ದರಾಮಯ್ಯ ಹಾಗೂ ಸುರ್ಜೆವಾಲ ಅವರು ಮಾತನಾಡಿದ್ದೇವೆ. ಮೊದಲ ಪಟ್ಟಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ನೀಡಿದ್ದೇವೆ. ನಾವು ನೀಡಿದ ಪಟ್ಟಿಯನ್ನು ಪಕ್ಷದ ಹೈಕಮಾಂಡ್ ಪರಿಶೀಲಿಸಲಿದ್ದಾರೆ. ಚುನಾವಣೆ ಹೊತ್ತಿನಲ್ಲಿ ಒಂದಷ್ಟು ಮಾತುಗಳನ್ನು ಕೊಟ್ಟಿರುತ್ತಾರೆ. ಹೈಕಮಾಂಡ್ ಯಾರಿಗೆ ಏನು ಸೂಚನೆ ನೀಡಿತ್ತೊ ಅದರ ಪ್ರಕಾರ ಅಂತಿಮ ಪಟ್ಟಿ ಸಿದ್ಧವಾಗಲಿದೆ ಎಂದು ಹೇಳಿದರು.

Comments (0)

Your email address will not be published. Required fields are marked *

Back to top button