ನಮ್ಮ ಆರೋಗ್ಯ ಚೆನ್ನಾಗಿರಬೇಕು ಎಂದು ನಾವು ಹಲವು ರೀತಿಯ ಕಸರತ್ತುಗಳನ್ನು ನಡೆಸುತ್ತೇವೆ, ವಿವಿಧ ಬಗೆಯ ಆಹಾರಗಳನ್ನು ತಿನ್ನುತ್ತೇವೆ. ವ್ಯಾಯಾಮ, ಯೋಗ, ಧ್ಯಾನ ಹೀಗೆ ಹಲವು ಪ್ರಕ್ರಿಯೆಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುತ್ತೇವೆ.ಆದರೆ ಆರೋಗ್ಯ ತಜ್ಞರು ಹೇಳುವ ಹಾಗೆ ಕೇವಲ ಒಂದು ವಾಲ್ನಟ್ ಬೀಜವನ್ನು ಇಡೀ ರಾತ್ರಿ ನೀರಿನಲ್ಲಿ ನೆನೆಹಾಕಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ನಮಗೆ ಅನೇಕ ಪ್ರಯೋಜನಗಳು ಸಿಗುತ್ತವೆ. ಹಾಗಾದರೆ ವಾಲ್ನಟ್ ಬೀಜದಲ್ಲಿರುವ ಪೌಷ್ಟಿಕಾಂಶದ ಪ್ರಮಾಣ ಏನು ಮತ್ತು ಅದರಿಂದ ನಮ್ಮ ಆರೋಗ್ಯಕ್ಕೆ ಸಿಗುವ ಲಾಭಗಳು ಯಾವುವು ಎಂಬುದನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ.ವಾಲ್ನಟ್ ಬೀಜಗಳು ನಮ್ಮ ಮೆದುಳಿನ ಆರೋಗ್ಯದ ಮೇಲೆ ಸಕಾರಾತ್ಮಕ ಪ್ರಭಾವ ಬೀರುತ್ತವೆ. ಏಕೆಂದರೆ ಇವುಗಳಲ್ಲಿ ಒಮೆಗಾ 3 ಫ್ಯಾಟಿ ಆಮ್ಲಗಳ ಪ್ರಮಾಣ ಹೇರಳವಾಗಿ ಕಂಡುಬಂದಿದ್ದು, ಮೆದುಳಿನ ಕಾರ್ಯ ಚಟುವಟಿಕೆಯನ್ನು ಅಭಿವೃದ್ಧಿಪಡಿಸುತ್ತದೆ.ಪ್ರತಿದಿನ ಒಂದೊಂದು ವಾಲ್ನಟ್ ಬೀಜವನ್ನು ನೆನೆಸಿ ತಿನ್ನುವುದರಿಂದ ನಮ್ಮ ಮಾನಸಿಕ ಅರಿವು, ನೆನಪಿನ ಶಕ್ತಿ ಮತ್ತು ಬುದ್ಧಿವಂತಿಕೆ ಹೆಚ್ಚಾ ಗುತ್ತದೆ.​ನೆನೆಸಿದ ವಾಲ್ನಟ್ ಬೀಜಗಳು ತಮ್ಮಲ್ಲಿ ಫೈಟಿಕ್ ಆಮ್ಲ ಕಡಿಮೆ ಮಾಡುವ ಗುಣವನ್ನು ಹೊಂದಿವೆ. ಹೀಗಾಗಿ ನಾವು ಸೇವಿಸಿದ ಆಹಾರ ನಮ್ಮ ದೇಹದಲ್ಲಿ ಚೆನ್ನಾಗಿ ಜೀರ್ಣವಾಗುತ್ತದೆ ಜೊತೆಗೆ ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಪಟ್ಟಂತೆ ಮಲಬದ್ಧತೆ, ಅಜೀರ್ಣತೆ ಹಾಗೂ ಹೊಟ್ಟೆ ಉಬ್ಬರ ಸಮಸ್ಯೆ ಇರುವುದಿಲ್ಲ. ಕರುಳಿನ ಆರೋಗ್ಯವನ್ನು ಸಹ ಇದು ಉತ್ತಮಪಡಿಸುತ್ತದೆ.

By admin

Leave a Reply

Your email address will not be published. Required fields are marked *

Verified by MonsterInsights