TUMKUR

ಪಾವಗಡದ ಧ್ರುವತಾರೆ ವೆಂಕಟರಮಣಪ್ಪ ವಿಧಿವಶ!

Ex minister venkataramanappa passed away

ಬೆಂಗಳೂರು/ತುಮಕೂರು: ತುಮಕೂರು ಜಿಲ್ಲೆಯ ಪಾವಗಡ ರಾಜಕೀಯದ ಭೀಷ್ಮ, ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ನಾಯಕ ಮತ್ತು ಮಾಜಿ ಸಚಿವರಾಗಿದ್ದ ವೆಂಕಟರಮಣಪ್ಪ (80) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ (Fortis) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಮುಂಜಾನೆ ಸುಮಾರು 6 ಗಂಟೆಯ ವೇಳೆಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ಖಚಿತಪಡಿಸಿವೆ.

ಜನಪ್ರಿಯ ಅಹಿಂದ ನಾಯಕ!

ವೆಂಕಟರಮಣಪ್ಪ ಅವರು ಕೇವಲ ರಾಜಕಾರಣಿಯಾಗಿರದೆ, ತುಮಕೂರು ಜಿಲ್ಲೆಯ ಅತ್ಯಂತ ಜನಪ್ರಿಯ ಮತ್ತು ಹಿಂದುಳಿದ ವರ್ಗಗಳ ಧ್ವನಿಯಾಗಿ ಗುರುತಿಸಿಕೊಂಡಿದ್ದರು. ಪಾವಗಡ ವಿಧಾನಸಭಾ ಕ್ಷೇತ್ರದಿಂದ ಒಟ್ಟು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಇವರು, ರಾಜ್ಯ ಸರ್ಕಾರದಲ್ಲಿ ಎರಡು ಬಾರಿ ಸಚಿವರಾಗಿ (ರೇಷ್ಮೆ, ಸಣ್ಣ ಕೈಗಾರಿಕೆ ಹಾಗೂ ಕಾರ್ಮಿಕ ಸಚಿವರು) ಅತ್ಯುತ್ತಮ ಸೇವೆ ಸಲ್ಲಿಸಿದ್ದರು. ತಮ್ಮ ಸರಳತೆ ಮತ್ತು ಜನಪರ ಕಾಳಜಿಯಿಂದಾಗಿ ಇಡೀ ಕ್ಷೇತ್ರದಲ್ಲಿ ಭಾರಿ ಪ್ರಭಾವ ಹೊಂದಿದ್ದರು. ಸದ್ಯ ಅವರ ಪುತ್ರ ಎಚ್.ವಿ. ವೆಂಕಟೇಶ್ ಅವರು ಪಾವಗಡ ಕ್ಷೇತ್ರದ ಹಾಲಿ ಶಾಸಕರಾಗಿದ್ದಾರೆ.

ವೆಂಕಟರಮಣಪ್ಪ ಅವರ ಹಠಾತ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಕಾಂಗ್ರೆಸ್ ಪಾಳಯ ಸೇರಿದಂತೆ ಇಡೀ ರಾಜ್ಯ ರಾಜಕೀಯ ವಲಯದಲ್ಲಿ ಶೋಕದ ಛಾಯೆ ಆವರಿಸಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸೇರಿದಂತೆ ಹಲವು ಪ್ರಮುಖ ನಾಯಕರು ಆಸ್ಪತ್ರೆಗೆ ಧಾವಿಸಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಶಾಸಕ ಎಚ್.ವಿ. ವೆಂಕಟೇಶ್ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಪಾವಗಡಕ್ಕೆ ಕೊಂಡೊಯ್ಯಲಾಗುತ್ತಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

#FreedomTV #Venkataramanappa #Pavagada #Tumakuru #CongressLeader #FormerMinister #RIPVenkataramanappa #KarnatakaPolitics #CongressNews #VenkataramanappaPassesAway #FortisHospital #BreakingNews #KarnatakaNews #TumkurPolitics

Comments (0)

Your email address will not be published. Required fields are marked *

Back to top button