ಪೂಜ್ಯ ಗೋವಿನ ಹತ್ಯೆ ಬೇಡ- ಹಿಂದೂ ಸಂಘಟನೆಗಳು!
Stop cow slaughter on Bakrid request by Hindu organisations in kodagu madikeri

ಮಡಿಕೇರಿ: ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಕ್ರಮ ಗೋಸಾಗಾಟ ಮತ್ತು ಗೋಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಸರ್ಕಾರ ಹಾಗೂ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಸಂಘಟನೆಗಳ ಪ್ರಮುಖರು ಆಗ್ರಹಿಸಿದ್ದಾರೆ. ಮಡಿಕೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಘಟನೆಯ ಮುಖಂಡರು, ಈ ಕುರಿತು ಜಿಲ್ಲಾಡಳಿತ ಮತ್ತು ಕಾನೂನು ಜಾರಿ ಸಂಸ್ಥೆಗಳಿಗೆ ಪ್ರಮುಖ ಬೇಡಿಕೆಗಳನ್ನೊಳಗೊಂಡ ಮನವಿ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಜಾರಿಯಲ್ಲಿರುವ ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020’ ಸೇರಿದಂತೆ ವಿವಿಧ ಪ್ರಾಣಿ ಸಂರಕ್ಷಣಾ ಕಾಯ್ದೆಗಳನ್ನು ಈ ಹಬ್ಬದ ಸಂದರ್ಭದಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು ಎಂದು ಅವರು ಒತ್ತಾಯಿಸಿದರು.

ಹಿಂದು ಸಂಘಟನೆಗಳ ಪ್ರಮುಖ ಬೇಡಿಕೆಗಳು
- ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ‘ಬೀಟ್ ಪೊಲೀಸ್’ ವ್ಯವಸ್ಥೆಯನ್ನು ಬಲಪಡಿಸುವ ಮೂಲಕ ಅಕ್ರಮ ಕಸಾಯಿಖಾನೆಗಳನ್ನು ಪತ್ತೆ ಹಚ್ಚಿ, ಅವುಗಳನ್ನು ಶಾಶ್ವತವಾಗಿ ಬಂದ್ ಮಾಡಬೇಕು.
- ಜಾನುವಾರು ವಧೆ ನಡೆಸಿರುವ ಮನೆ, ಕಟ್ಟಡ ಅಥವಾ ಖಾಲಿ ಜಾಗಗಳನ್ನು ಕಾನೂನುಬದ್ಧವಾಗಿ ಜಪ್ತಿ ಮಾಡಬೇಕು. ಗೋಹತ್ಯೆ ಅಪರಾಧಿಗಳಿಗೆ ಕನಿಷ್ಠ 7 ವರ್ಷಗಳ ಜೈಲು ಶಿಕ್ಷೆ ಹಾಗೂ ಪ್ರತಿ ಜಾನುವಾರಿಗೆ ₹1 ಲಕ್ಷ ದಂಡ ವಿಧಿಸಲು ಕಟ್ಟುನಿಟ್ಟಿನ ಕ್ರಮ ಜರುಗಿ
- ಅನಧಿಕೃತ ಸ್ಥಳಗಳಲ್ಲಿ ಕಟ್ಟಿಹಾಕಿರುವ ಅಥವಾ ಅನುಮಾನಾಸ್ಪದವಾಗಿ ಸಂಗ್ರಹಿಸಿಡಲಾಗಿರುವ ಜಾನುವಾರುಗಳನ್ನು ತಕ್ಷಣವೇ ವಶಕ್ಕೆ ಪಡೆದು ಸುರಕ್ಷಿತ ಗೋಶಾಲೆಗಳಿಗೆ ಹಸ್ತಾಂತರಿಸಬೇಕು.
- ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅಕ್ರಮ ಸಾಗಾಟ ತಡೆಯಲು ಹೆದ್ದಾರಿಗಳು ಹಾಗೂ ಗ್ರಾಮೀಣ ರಸ್ತೆಗಳಲ್ಲಿ 24 ಗಂಟೆಗಳ ಕಾಲ ಪೊಲೀಸ್ ಗಸ್ತು ವ್ಯವಸ್ಥೆ ಇರಬೇಕು. ಪ್ರಮುಖವಾಗಿ ಕಾರುಗಳು, ಖಾಸಗಿ ವಾಹನಗಳು, ಹಾಲಿನ ಟ್ಯಾಂಕರ್ಗಳು ಮತ್ತು ಕಂಟೈನರ್ಗಳನ್ನು ಸೂಕ್ಷ್ಮವಾಗಿ ತಪಾಸಣೆ ನಡೆಸಬೇಕು.
- ಬೇರೆ ರಾಜ್ಯಗಳಿಂದ ತರಲಾದ ಮಾಂಸ ಎಂದು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಸಾಗಾಟ ಮಾಡುವ ಜಾಲದ ಬಗ್ಗೆ ಸಮಗ್ರ ತನಿಖೆ ನಡೆಸಬೇಕ
- ಈ ಹಿಂದೆ ಕಾನೂನುಬಾಹಿರ ಗೋಸಾಗಾಟ ಮತ್ತು ಗೋಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಹಳೇ ಆರೋಪಿಗಳ ಪಟ್ಟಿಯನ್ನು ಸಿದ್ಧಪಡಿಸಿ, ಅವರಿಗೆ ಮುಂಜಾಗ್ರತಾ ಎಚ್ಚರಿಕೆ ನೋಟಿಸ್ ನೀಡಬೇಕು ಎಂದು ಮುಖಂಡರು ಒತ್ತಾಯಿಸಿದರು.
ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಮತ್ತು ಕಾನೂನಿನ ಗೌರವ ಕಾಯುವ ಸಲುವಾಗಿ ಪೊಲೀಸ್ ಇಲಾಖೆ ಯಾವುದೇ ಒತ್ತಡಕ್ಕೆ ಮಣಿಯದೇ ಕಾರ್ಯನಿರ್ವಹಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಹಿಂದೂ ಸಂಘಟನೆಯ ಪ್ರಮುಖರು ಒಕ್ಕೊರಲಿನಿಂದ ಆಗ್ರಹಿಸಿದರು.
#Madikeri #Kodagu #Bakrid2026 #AntiCattleSlaughterAct #SaveCows #HinduSanghatan #KodaguNews #KarnatakaPolice #GoShala #IllegalCattleTransport #FreedomTV