ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟೂ ಶೀಘ್ರದಲ್ಲಿಯೇ ಏರ್ಪಡಿಸುವಂತೆ ಕೆ.ಪಿ.ಎಸ್.ಸಿ ಗೆ ಸೂಚಿಸಲಾಗಿದೆ. ಕಾನ್‌ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಇದ್ದು, ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ.ಈ ಮೂಲಕ ಪೊಲೀಸ್ ಒದುತ್ತಿರುವ ಸ್ಪರ್ಧಾರ್ಥಿಗಳಿಗೆ ಕರ್ನಾಟಕ ಸರ್ಕಾರ ಸಿಹಿ ಸುದ್ದಿ ಕೊಟ್ಟಿದೆ.