Thursday, November 20, 2025
21.7 C
Bengaluru
Google search engine
LIVE
ಮನೆ#Exclusive Newsಪ್ರಜ್ವಲ್‌ ಜಾಮೀನೂ ಅರ್ಜಿ ತಿರಸ್ಕಾರ ಮಾಡಿದ ಹೈಕೋರ್ಟ್​!

ಪ್ರಜ್ವಲ್‌ ಜಾಮೀನೂ ಅರ್ಜಿ ತಿರಸ್ಕಾರ ಮಾಡಿದ ಹೈಕೋರ್ಟ್​!

ರೇಪ್‌ ಕೇಸು: ಪ್ರಜ್ವಲ್ ಅರ್ಜಿ ಹೈಕೋರ್ಟಲ್ಲಿ ವಜಾ • ಕನ್ನಡಪ್ರಭ ವಾರ್ತೆ

ಬೆಂಗಳೂರು: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ಸಲ್ಲಿಸಿದ್ದ ಒಂದು ಜಾಮೀನು ಮತ್ತು ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿ ಹೈಕೋರ್ಟ್ ಸೋಮವಾರ ಆದೇಶಿಸಿದೆ. ಪ್ರಜ್ವಲ್‌ವಿರುದ್ಧಅತ್ಯಾಚಾರ, ಲೈಂಗಿಕ ದೌರ್ಜನ್ಯ, ಮಹಿಳೆಯರ ಘನತೆಗೆ ಧಕ್ಕೆ ಉಂಟು ಮಾಡಿದ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದ ಸಂಬಂಧ ಪ್ರತ್ಯೇಕವಾಗಿ ನಾಲ್ಕು ಎಫ್‌ಐಆರ್‌ಗಳು ದಾಖಲಾಗಿವೆ. ಈ ಪೈಕಿ ಮೂರು ಪ್ರಕರಣಗಳಲ್ಲಿ ಒಂದು ಜಾಮೀನು ಮತ್ತು ಎರಡುನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಪ್ರಜ್ವಲ್ ಹೈಕೋರ್ಟ್‌ಗೆ ಸಲ್ಲಿಸಿದ್ದರು. ಈ ಮೂರು ಅರ್ಜಿಗಳನ್ನು ಸಾರಾಸಗಟಾಗಿ ತಿರಸ್ಕರಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, ಮೇಲ್ನೋಟಕ್ಕೆ ಅರ್ಜಿದಾರರ ಕೃತ್ಯಗಳು ಲಂಪಟ ಹಾಗೂ ಇಂದ್ರಿಯಗಳ ಮೇಲೆ ನಿಯಂತ್ರಣ ಕಳೆದು ಕೊಂಡಿರುವುದು ಮತ್ತು ಸ್ವಾಸ್ಥ್ಯ ಸಮಾಜದ ಬೆನ್ನುಹುರಿಗೆ ಚಳಿ ಹುಟ್ಟಿಸುವುದನ್ನು ಚಿತ್ರಿಸುತ್ತಿದೆ. ಹಾಗಾಗಿ, ಜಾಮೀನು ಪಡೆಯಲು ಪ್ರಜ್ವಲ್ ರೇವಣ್ಣ ಅರ್ಹರಾಗಿಲ್ಲ ಎಂದು ಕಟುವಾಗಿ ನುಡಿದಿದ್ದಾರೆ. ಹೈಕೋರ್ಟ್‌ನ ಈ ಆದೇಶದಿಂದ ಪ್ರಜ್ವಲ್ ಅವರು ಈಗ ಜಾಮೀನುಗಾಗಿ ಸುಪ್ರಿಂ ಕೋರ್ಟ್ ಮೊರೆ ಹೋಗಬೇಕಿದೆ. ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮನೆಕೆಲಸದಾಕೆ ನೀಡಿರುವ ದೂರಿನನ್ವಯ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ಜಾಮೀನು ಕೋರಿದ್ದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments