ಜಿಲ್ಲೆ

ಬಾಬಾ ಸಾಹೇಬ್ ಅಂಬೇಡ್ಕರ್ ಮಹಾ ಪರಿನಿಬ್ಬಾಣ ದಿನಾಚರಣೆ

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಮಹಾ ಪರಿನಿಬ್ಬಾಣ ದಿನಾಚರಣೆ ಆಚರಿಸಲಾಗಿದೆ. ಡಾ. ಬಿ.ಆರ್.ಅಂಬೇಡ್ಕರ್ ರವರ ಮಹಾ ಪರಿನಿಬ್ಬಾಣ ದಿನಾಚರಣೆಯ ಪ್ರಯುಕ್ತ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗಿದೆ. ಬಿಬಿಎಂಪಿ ಆಡಳಿತಗಾರರು, ಮುಖ್ಯ ಆಯುಕ್ತರಿಂದ ಮಾಲಾರ್ಪಣೆ ಹಾಗೂ ಪುಷ್ಪನಮನ ಸಲ್ಲಿಸಿದರು.


ಇದೇ ವೇಳೆ ವಿಶೇಷ ಆಯುಕ್ತರಾದ ಡಾ. ಕೆ ಹರೀಶ್ ಕುಮಾರ್, ರೆಡ್ಡಿ ಶಂಕರ ಬಾಬು, ರಾಮಚಂದ್ರನ್, ವಲಯ ಆಯುಕ್ತರಾದ ಸ್ನೇಹಲ್, ವಿನೋತ್ ಪ್ರಿಯಾ, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Comments (0)

Your email address will not be published. Required fields are marked *

Back to top button