ಬೆಂಗಳೂರು: ರಾಜ್ಯದ ಹಿರಿಯ ಶಾಸಕ, ಮಾಜಿ ಮಂತ್ರಿ ದಾವಣಗೆರೆಯ ಭೀಷ್ಮ ಶಾಮನೂರು ಶಿವಶಂಕಪ್ಪ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, 92 ವರ್ಷದ ಜೀವನ ಯಾತ್ರೆ ಮುಗಿಸಿದ್ದಾರೆ.
ಕಳೆದ ಕೆಲದಿನಗಳಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು, ಸ್ಪರ್ಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿವಶಂಕರಪ್ಪ ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆ ಭಾನುವಾರ ಸಂಜೆ ಮೃತಪಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.


