ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಮನಗರ ಹೆಸರು ಬದಲಾವಣೆ ಬಳಿಕ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆಯಾಗಿ ಬದಲಾವಣೆ ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿದೆ..
ಇಂದು ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ನಡೆದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆಯಾಗಿ ಹಾಗೂ ಚಿಕ್ಕಬಳ್ಳಾಪುರದ ಬಾಗೇಪಲ್ಲಿಯನ್ನು ಭಾಗ್ಯನಗರ ಎಂದು ಮರುನಾಮಕರಣ ಮಾಡಿದೆ..
ಈಗಾಗಲೇ ಕಾಂಗ್ರೆಸ್ ಸರ್ಕಾರ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡಿತ್ತು. ಇದೀಗ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ಮತ್ತು ನೆಲಮಂಗಲ ತಾಲೂಕುಗಳನ್ನೊಳಗೊಂಡ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆಯಾಗಿ ಮರುನಾಮಕರಣ ಮಾಡಿದೆ.