Monday, June 23, 2025
26.6 C
Bengaluru
Google search engine
LIVE
ಮನೆ#Exclusive NewsTop Newsಬೆಂಗಳೂರು: ಮುಗಿಯದ ಇ-ಖಾತಾ ಸಂಕಷ್ಟ, ಅಧಿಕಾರಿಗಳ ನಡೆಯಿಂದ ಜನ ಕಂಗಾಲು

ಬೆಂಗಳೂರು: ಮುಗಿಯದ ಇ-ಖಾತಾ ಸಂಕಷ್ಟ, ಅಧಿಕಾರಿಗಳ ನಡೆಯಿಂದ ಜನ ಕಂಗಾಲು

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಆಸ್ತಿ ಮಾರಾಟ, ಖರೀದಿ ಸೇರಿದಂತೆ ಇತರೆ ಕೆಲಸಗಳಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದೆ. ಇನ್ನು, ಇ-ಖಾತಾ ಪಡೆಯೋಕೆ ಪ್ರತಿ ವಾರ್ಡ್​ನ ಬಿಬಿಎಂಪಿ ಕಚೇರಿಗಳಲ್ಲಿ ಅವಕಾಶ ಕಲ್ಪಿಸಿದ್ದರೂ, ಬೆಂಗಳರು ಒನ್ ಕೇಂದ್ರಗಳಲ್ಲಿ ಇ-ಖಾತಾ ಪಡೆಯಲು ಅವಕಾಶ ನೀಡಿದ್ದರೂ ಸಹ ಜನರಿಗೆ ಮಾತ್ರ ಸಮಸ್ಯೆ ತಪ್ಪದಂತಾಗಿದೆ. ದಾಖಲೆಗಳು ಸರಿಯಿದ್ದರೆ ಸರ್ವರ್ ಇರಲ್ಲ, ಸರ್ವರ್ ಸರಿಯಿದ್ದರೆ ದಾಖಲೆ ಇಲ್ಲ ಎಂಬ ಸಂದಿಗ್ದ ಪರಿಸ್ಥಿತಿ ಉಂಟಾಗಿ ಜನರು ಇ-ಖಾತಾ ಪಡೆಯೋಕೆ ಪರದಾಡುತ್ತಿದ್ದಾರೆ.

ಸದ್ಯ ಕೃಷಿಭೂಮಿಯಿಂದ ಪರಿವರ್ತನೆಯಾದ ಜಾಗಗಳು, ಬಿಡಿಎ ಸ್ವಾಧೀನ ಬಳಿಕ ಕೈಬಿಟ್ಟ ಜಾಗಗಳು, ಎ-ಖಾತಾ, ಬಿ-ಖಾತಾ ಪಡೆಯುವಾಗ ಮ್ಯಾನುವಲ್ ಇದ್ದಿದ್ದರಿಂದ ಕೆಲ ದಾಖಲೆಗಳು ಇಲ್ಲದಿದ್ದರೂ ಖಾತಾ ಲಭ್ಯವಾಗಿದೆ. ಆದರೆ, ಇದೀಗ ಇ-ಖಾತಾ ಮಾಡಿಸಲು ಕೆಲ ದಾಖಲೆಗಳು ಸೂಕ್ತ ರೀತಿಯಲ್ಲಿ ಒದಗಿಸಲು ಆಗದಿರುವುದರಿಂದ ಜನರಿಗೆ ಸಂಕಷ್ಟವಾಗಿದೆ. ಕಟ್ಟಡ ಮಂಜೂರು ನಕ್ಷೆ, ಕೂಡ ಹಲವು ಮಾಲೀಕರ ಬಳಿ ಇಲ್ಲದಿರುವುದು ಕೂಡ ಸಮಸ್ಯೆಗೆ ಕಾರಣವಾಗಿದೆ. ಇ-ಖಾತಾ ಪಡೆಯಲು ಇನ್ನೂ ಪರದಾಡವ ಸ್ಥಿತಿ ನಿರ್ಮಾಣವಾಗಿದೆ. ಇ-ಖಾತಾ ಪಡೆಯಲು ಹೋದರೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂಬ ಆರೋಪ ಕೂಡ ಕೇಳಿಬರುತ್ತಿದ್ದು, ಇ-ಖಾತಾ ಸಮಸ್ಯೆಗಳನ್ನು ಬಗೆಹರಿಸದ ಪಾಲಿಕೆ ವಿರುದ್ಧ ಜನರು ಕಿಡಿಕಾರುತ್ತಿದ್ದಾರೆ.

ಇತ್ತ ಇ-ಖಾತಾ ಸಮಸ್ಯೆಗೆ ಹೆಲ್ಪ್ ಲೈನ್ ಬಿಟ್ಟು ಸೈಲೆಂಟ್ ಆಗಿರೋ ಪಾಲಿಕೆ ಖಾತಾ ಸಮಸ್ಯೆ ಬಗೆಹರಿಸೋಕೆ ಎಷ್ಟೇ ಸರ್ಕಸ್ ಮಾಡಿದ್ರೂ ಪರಿಹಾರ ಸಿಗದಂತಾಗಿದೆ. ಸದ್ಯ ಪಾಲಿಕೆ ವ್ಯಾಪ್ತಿಯಲ್ಲಿ ಇ-ಖಾತಾ ಅರ್ಜಿಗಳಿಗೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 46,962 ಅರ್ಜಿಗಳು ಬಂದಿದ್ದು, ಈ ಪೈಕಿ ಈಗಾಗಲೇ 39,784 ಅರ್ಜಿಗಳಿಗೆ ಅನುಮೋದನೆ ನೀಡಿ ಅಂತಿಮ ಇ-ಖಾತಾ ನೀಡಲಾಗಿದೆ. ಆದರೆ, ಇನ್ನೂ ಲಕ್ಷಗಟ್ಟಲೇ ಆಸ್ತಿ ಮಾಲೀಕರು ಇ-ಖಾತಾ ಪಡೆಯಲು ಪರದಾಡುತ್ತಿದ್ದು, ಜನರು ಸುಸ್ತಾಗಿದ್ದಾರೆ. ಆದರೆ, ಇದೀಗ, ಇ-ಖಾತಾ ಸಮಸ್ಯೆ ಬಗೆಹರಿಸುತ್ತೇವೆ ಅಂತ ಅದೇ ರಾಗ ಹಾಡುತ್ತಿರುವ ಪಾಲಿಕೆ ಇನ್ನಾದರೂ ಇ-ಖಾತಾ ಸಂಕಷ್ಟಗಳನ್ನು ಬಗೆಹರಿಸಬೇಕಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments